ವಿಜಯಪುರ:– ವಿಜಯಪುರದ ನಿಡಗುಂದಿ ತಾಲೂಕಿನ ಬೇನಾಳ ಬಳಿಯ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ತಾಯಿಯೊಬ್ಬಳು 4 ಮಕ್ಕಳನ್ನು ಕಾಲುವೆಗೆ ಎಸೆದು ತಾನೂ ಜೀವ ಬಿಡಲು ಯತ್ನಿಸಿದ ದಾರುಣ ಘಟನೆ ಜರುಗಿದೆ.
5 ವರ್ಷದ ತನು ನಿಂಗರಾಜ ಭಜಂತ್ರಿ, 3 ವರ್ಷದ ರಕ್ಷಾ ಭಜಂತ್ರಿ, 2 ವರ್ಷ 13 ತಿಂಗಳ ಹಸೇನ್ ನಿಂಗರಾಜ ಭಜಂತ್ರಿ ಮೃತ ಮಕ್ಕಳು ಎಂದು ಗುರುತಿಸಲಾಗಿದೆ. ಮೃತರು ಕೊಲ್ಹಾರ ತಾಲೂಕಿನ ತೆಲಗಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ಕೌಟುಂಬಿಕ ಕಲಹವೇ ಘಟನೆಗೆ ಕಾರಣ ಎನ್ನಲಾಗಿದೆ.
ಕಾಲುವೆಗೆ ಜಿಗಿದಿದ್ದ ತಾಯಿ ಭಾಗ್ಯಳನ್ನು ಸ್ಥಳೀಯರು ರಕ್ಷಿಸಿದ್ದಾರೆ. ಕಾಲುವೆಯಿಂದ ತನು, ರಕ್ಷಾ ಮೃತದೇಹವನ್ನು ಮೀನುಗಾರರು ಹೊರತೆಗೆದಿದ್ದು, ಮತ್ತಿಬ್ಬರ ಮೃತದೇಹ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆದಿದೆ.