ಮಡಿಕೇರಿ:- ಬಾಣಂತಿ ಓರ್ವರು, 14 ದಿನದ ಮಗು ಹಾಗೂ ಪತಿಯನ್ನು ತ್ಯಜಿಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕೊಟ್ಟೋಳಿಯಲ್ಲಿ ಜರುಗಿದೆ.
ತೆಂಗಿನ ಎಣ್ಣೆ ಹೀಗೆ ಬಳಸಿ: ಮೊಣಕಾಲುದ್ದ ಕೇಶರಾಶಿ ನಿಮ್ಮದಾಗುತ್ತೆ..! 100% ರಿಸಲ್ಟ್!
ಕಾವೇರಮ್ಮ ನೇಣಿಗೆ ಶರಣಾದ ಮಹಿಳೆ ಎಂದು ಗುರುತಿಸಲಾಗಿದೆ. ದಿನೇಶ್-ಕಾವೇರಮ್ಮ ಮದುವೆಯಾಗಿ ಸುಮಾರು 4 ವರ್ಷಗಳು ಕಳೆದಿದೆ. ಫೆ.12 ರಂದು ಪತಿ ದಿನೇಶ್ ತಮ್ಮ ಮನೆಯ ಸನೀಹದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಮನೆಯಲ್ಲಿ ಮಗುವಿನ ಕೂಗಾಟ ಕೇಳಿ ಬಂದು ನೋಡಿದ್ದಾರೆ. ಕಾವೇರಮ್ಮ ಸ್ನಾನದ ಕೋಣೆಯಲ್ಲಿ ಸೀರೆಯಿಂದ ನೇಣುಬಿಗಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.