ವಿಜಯಪುರ:- ವಿಜಯಪುರದಲ್ಲಿ ಮನಕಲಕುವ ಘಟನೆಯೊಂದು ನಡೆದಿದ್ದು, ನಾಲ್ಕು ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತ ಜೋಡಿ ನೇಣಿಗೆ ಶರಣಾಗಿದ್ದಾರೆ.
ನೆನಪಿಡಿ.. ಅಪ್ಪಿತಪ್ಪಿಯೂ ಊಟದ ಬಳಿಕ ಎಂದಿಗೂ ಈ ತಪ್ಪುಗಳನ್ನು ಮಾಡದಿರಿ..!
30 ವರ್ಷದ ಮನೋಜ್ ಕುಮಾರ್ ಪೋಳ , 23 ವರ್ಷದ ರಾಖಿ ನೇಣಿಗೆ ಶರಣಾದ ದಂಪತಿ ಎನ್ನಲಾಗಿದೆ. ವಿಜಯಪುರ ನಗರದ ಹೊರ ಭಾಗದ ಶ್ರೀ ಸಿದ್ದೇಶ್ವರ ಬಡಾವಣೆಯ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಕಳೆದ 4 ತಿಂಗಳ ಹಿಂದೆ ಜೋಡಿ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಸೋಮವಾರ ತಡರಾತ್ರಿ ಊಟ ಮಾಡಿದ ಬಳಿಕ ನವ ವಿವಾಹಿತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೋಜ್ ಕುಮಾರ್ ಹಾಗೂ ರಾಖಿ ಇಬ್ಬರೇ ಮನೆಯಲ್ಲಿದ್ದ ವೇಳೆ ಘಟನೆ ನಡೆದಿದೆ.
ಮನೋಜ್ ಕುಮಾರ್ ತಾಯಿ ಭಾರತಿ ಮಗಳ ಊರಿಗೆ ಹೋಗಿದ್ದರು. ಇಂದು ಬೆಳಗ್ಗೆ ವಾಪಸ್ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಜಲನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.