ರಾಮನಗರ :- ಕ್ಷಯರೋಗಿಗಳಿಗೆ ಪೌಷ್ಟಿಕಾಂಶಯುಕ್ತ ಆಹಾರ ಅತಿ ಅತ್ಯಗತ್ಯವಾಗಿದೆ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಕುಮಾರ್ ಕೆ ಅವರು ತಿಳಿಸಿದರು.
ಅವರು ನ. 21ರ ಮಂಗಳವಾರ ರಾಮನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿಗಳ ಕಚೇರಿ ಹಾಗೂ ರಾಮನಗರ ಜಿಲ್ಲಾ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದೊಂದಿಗೆ ಕ್ಷಯರೋಗಿಗಳಿಗೆ ಉಚಿತವಾಗಿ ಪೌಷ್ಟಿಕಾಂಶಯುಕ್ತ ಆಹಾರ ಕಿಟ್ಗಳ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಪ್ರಧಾನ ಮಂತ್ರಿಯವರ ಟಿ.ಬಿ ಮುಕ್ತ ಭಾರತ್ ನಿಕ್ಷಯ್ ಮಿತ್ರ ಯೋಜನೆಯಡಿಯಲ್ಲಿ ಕ್ಷಯರೋಗಿಗಳಿಗೆ ಚಿಕಿತ್ಸೆಯ ಜೊತೆಯಲ್ಲಿ ಆರೋಗ್ಯ ವೃದ್ದಿಸುವಲ್ಲಿ ಪೌಷ್ಟಿಕ ಆಹಾರ ಸೇವನೆ ಬಹಳ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಪ್ರತಿ ಕ್ಷಯರೋಗಿಗೆ ಚಿಕಿತ್ಸಾ ಅವಧಿಯಲ್ಲಿ ಪ್ರತೀ ಮಾಹೆ 500 ರೂಗಳ ಸಹಾಯಧನವನ್ನು ಅವರ ಉಳಿತಾಯ ಖಾತೆಗೆ ರವಾನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಡಿಎಂಒ ಡಾ. ಶಶಿಧರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಗಂಗಾಧರ್ ಬಿ.ಎಸ್, ರಾಮನಗರ ಜಿಲ್ಲಾ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾಧ್ಯಕ್ಷರಾದ ಶೇಷಾದ್ರಿ ಅಯ್ಯರ್, ಸಭಾಪತಿ ಬಾಲಕೃಷ್ಣ, ಪ್ರಧಾನಕಾರ್ಯದರ್ಶಿ ಎಸ್. ರುದ್ರೇಶ್ವರ, ಖಜಾಂಚಿ ಪರಮಶಿವಯ್ಯ, ಸದಸ್ಯರಾದ ಚಂದ್ರಶೇಖರಯ್ಯ, ಸಕ್ಬತ್ ಉಲ್ಲಖಾನ್, ಶಂಕರಯ್ಯ, ಮಧುಸೂದನ್, ಸಂಜಯ, ನರೇಂದ್ರ, ಶಾರದ, ಮೇಲ್ವಿಚಾರಕರಾದ ಕೃಷ್ಣೇಗೌಡ, ಶಿವನಂಜಯ್ಯ, ತೇಜಸ್ ಕುಮಾರ್ ಹಾಗೂ ಫಲಾನುಭವಿಗಳು ಹಾಜರಿದ್ದರು.