ಕಲಬುರ್ಗಿ:– ವ್ಯಕ್ತಿಯ ಮೇಲೆ ಮೂವರಿಂದ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಿದ ಘಟನೆ ಕಲಬುರಗಿ ಜಿಲ್ಲಾ ಕೋರ್ಟ್ ಆವರಣದಲ್ಲಿ ಜರುಗಿದೆ
ಧೀರಜ್ ಹಲ್ಲೆಗೊಳಗಾದ ವ್ಯಕ್ತಿ ಎಂದು ತಿಳಿದು ಬಂದಿದೆ. ಪ್ರಶಾಂತ್ ಪಾಟೀಲ್ (20), ವೀರೇಶ್ ಪಾಟೀಲ್ (19), ರಾಮು ಪಾಟೀಲ್ (38) ಹಲ್ಲೆ ಮಾಡಿದ ಆರೋಪಿಗಳು ಎನ್ನಲಾಗಿದೆ. ತಲ್ವಾರ್ ದಾಳಿಯಿಂದ ಧೀರಜ್ಗೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಲ್ಲೆ ಮಾಡುತ್ತಿದ್ದ ವೇಳೆ ಕೋರ್ಟ್ ಆವರಣದಲ್ಲಿದ್ದ ಸಾರ್ವಜನಿಕರು ಮತ್ತು ವಕೀಲರು ಆರೋಪಿಗಳನ್ನು ತಡೆದಿದ್ದಾರೆ. ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ವಯುಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಹಲ್ಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.