ಬೆಂಗಳೂರು: ಬೆಂಗಳೂರಿನಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಮನೆಗೆ ಸ್ವಲ್ಪ ದೂರದಲ್ಲಿರುವ ಆಂಜನೇಯ ದೇವಸ್ಥಾನದ ಬಳಿ ಹನುಮ ಜಯಂತಿ ಅಂಗವಾಗಿ ಅನ್ನದಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವ್ಯಕ್ತಿಯನ್ನು ಎಲ್ಲರೆದುರೇ ಅಟ್ಟಾಡಿಸಿ ಕೊಚ್ಚಿ ಕೊಲೆ ಮಾಡಿದ ದುರ್ಘಟನೆ ನಡೆದಿದೆ.
iPhone 16 ಲೈನ್ಅಪ್ ಬಗ್ಗೆ ನಿಮಗೇನು ಗೊತ್ತು?: A18 ಚಿಪ್ ಯಾಕೆ ಹಾಕ್ತಾರೆ ಗೊತ್ತಾ?
ರಾಜ್ಯದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಮನೆ ಹತ್ತಿರ ವ್ಯಕ್ತಿಯ ಹತ್ಯೆ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಜೈ ಪ್ರಕಾಶ್ ಅಲಿಯಾಸ್ ನಾಯಿ ಅಪ್ಪಿ ಎಂದು ಗುರುತಿಸಲಾಗಿದೆ. ಆಡುಗೋಡಿ ಠಾಣಾ ವ್ಯಾಪ್ತಿಯ ಲಕ್ಕಸಂದ್ರ ಬಳಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಆಡುಗೋಡಿ ಪೊಲೀಸರು ಭೇಟಿ ಪರಿಶೀಲನೆ ಮಾಡುತ್ತಿದ್ದಾರೆ.