ವಿಜಯಪುರ: ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ದೇವಣಗಾಂವ ಗ್ರಾಮದಲ್ಲಿ ಘಟನೆ ನಡೆದಿದೆ.
ನೇಣು ಬಿಗಿದ ಸ್ಥಿತಿಯಲ್ಲಿ ಅಂದಾಜು 35 ವರ್ಷದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಆಲಮೇಲ ಠಾಣೆಯ ಪಿಎಸ್ಐ ಅರವಿಂದ ಅಂಗಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಪಟ್ಟ ವ್ಯಕ್ತಿಯ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು, ಕೊಲೆಯೋ ಆತ್ಮಹತ್ಯೆಯೋ ಎಂಬ ವಿಚಾರವಾಗಿ ತನಿಖೆ ನಡೆಸಲು ಮುಂದಾಗಿದ್ದಾರೆ.