ತುಮಕೂರು:- ಸಿನಿಮೀಯಾ ಶೈಲಿಯಲ್ಲಿ ಕಳ್ಳನನ್ನು ಪೊಲೀಸ್ ಪೆದೆಯೊಬ್ಬರು ಹಿಡಿದ ಘಟನೆ ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.
ಕಳ್ಳನನ್ನು ಹಿಡಿಯುವ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ನಿಷ್ಠೆಗೆ ಸಾರ್ವಜನಿಕ ವಲಯದಲ್ಲಿ ಬಾರಿ ಮೆಚ್ಚುಗೆ ವ್ಯಕ್ತವಾಗಿದೆ.
ನನ್ನಲ್ಲಿ ಶಕ್ತಿ ಕುಗ್ಗಿದೆ: ಅನರ್ಹತೆ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್ ಫೋಗಟ್
ಮಂಜೇಶ್@420 ಮಂಜ @ಹೊಟ್ಟೆ ಮಂಜ ಪೊಲೀಸ್ ಕೈಗೆ ಸಿಕ್ಕಿಬಿದ್ದ ಖತರ್ನಾಕ್ ಕಳ್ಳ. ಕೊರಟಗೆರೆ ಪೊಲೀಸ್ ಠಾಣೆಯ ಪೇದೆ ದೊಡ್ಡಲಿಂಗಯ್ಯ ಕಳ್ಳನನ್ನು ಹಿಡಿದವರು. ಸುಮಾರು 10ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ 420 ಮಂಜನನ್ನು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯ ಸಿಗ್ನಲ್ ಬಳಿ ಪೇದೆ ಸೆರೆ ಹಿಡಿದಿದ್ದಾರೆ.
ಸಿಗ್ನಲ್ನಲ್ಲಿ ಸ್ಕೂಟರ್ನಲ್ಲಿ ಹೋಗುತ್ತಿದ್ದ ಕಳ್ಳನನ್ನು ಪೇದೆ ಅಡ್ಡಗಟ್ಟಿದ್ದಾರೆ. ಆದರೂ ಅವರನ್ನು ಎಳೆದುಕೊಂಡು ಕಳ್ಳ ಮುಂದೆ ಸಾಗಿದ್ದಾನೆ. ಪಟ್ಟು ಬಿಡದ ಪೊಲೀಸ್, ಕಳ್ಳನನ್ನು ಬೆನ್ನಟ್ಟಿ ಕಾಲನ್ನು ಹಿಡಿದು ನೆಲಕ್ಕೆ ಬೀಳಿಸಿದ್ದಾರೆ. ಬಳಿಕ ಅಲ್ಲಿದ್ದ ಟ್ರಾಫಿಕ್ ಪೊಲೀಸರು ಕಳ್ಳನನ್ನು ಹಿಡಿಯಲು ನೆರವಾಗಿದ್ದಾರೆ. ನಂತರ ಸ್ಥಳಕ್ಕೆ ಸಾರ್ವಜನಿಕರು ಆಗಮಿಸಿ ಕಳ್ಳನಿಗೆ ಹಿಗ್ಗಾಮುಗ್ಗಾ ಬಾರಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.