ಹಾಸನ : ಚಾಲಕನ ನಿಯಂತ್ರಣ ತಪ್ಪಿ ಪೊಲೀಸ್ ಅಧಿಕಾರಿ ಜೀಪ್ ರಸ್ತೆ ಬದಿಯ ಮನೆಗೆ ಡಿಕ್ಕಿ ಹೊಡೆದಿದೆ. ಹಾಸನ ತಾಲೂಕಿನ ಕಿತ್ತಾನೆ ಬಳಿ ಘಟನೆ ನಡೆದಿದ್ದು, ಅವಘಡದಲ್ಲಿ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಹಾಗೂ ಚಾಲಕನಿಗೆ ಗಂಭೀರ ಗಾಯವಾಗಿದೆ. ದೀಕ್ಷಿತ್ ಇಂದು ಹೊಳೆನರಸೀಪುರ ಪ್ರೊಬೇಷನರಿ ಡಿವೈಎಸ್ಪಿಯಾಗಿ ರಿಪೋರ್ಟ್ ಮಾಡಲು ತೆರಳುತ್ತಿದ್ದರು. ಈ ವೇಳೆಯ ಅವಘಡ ಸಂಭವಿಸಿದ್ದು, ದೀಕ್ಷಿತ್ ಹಾಗೂ ಮಂಜೇಗೌಡ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರನ್ನೂ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಶಾಂತಿಗ್ರಾಮ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚಾಲಕನ ನಿಯಂತ್ರಣ ತಪ್ಪಿ ಮನೆಗೆ ಡಿಕ್ಕಿ ಹೊಡೆದ ಪೊಲೀಸ್ ಅಧಿಕಾರಿ ಜೀಪ್
By Author AIN