ಚಿತ್ರದುರ್ಗ: ಕ್ಷುಲ್ಲಕ ಕಾರಣಕ್ಕೆ ಗಂಡ ಹೆಂಡತಿ ನಡುವೆ ಜಗಳ ನಡೆದು ಪತ್ನಿ ಕತ್ತು ಕೊಯ್ದು ಪರಾರಿಯಾಗಿರುವ ಘಟನೆ ಚಿತ್ರದುರ್ಗದ ಭರಮಸಾಗರದಲ್ಲಿ ನಡೆದಿದೆ. ಚಿತ್ರದುರ್ಗದ ಭರಮಸಾಗರದ ಸುಲ್ತಾನಿಪುರದ ದಾದಾಪೀರ್ ಮತ್ತು ಸಮೀನಾ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದೆ.
ಜಗಳ ಮಧ್ಯೆ ಗಂಡ ಪತಿ ದಾದಾಪೀರ್ ಹೆಂಡತಿ ಸಮೀನಾಳ ಕತ್ತನ್ನು ಮಚ್ಚಿನಿಂದ ಕೊಯ್ದು ಪರಾರಿಯಾಗಿದ್ದಾನೆ. ಭರಮಸಾಗರದ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.