ಲಂಡನ್:- ಬ್ರಿಟನ್ ತನ್ನ ದೇಶದಲ್ಲಿನ ಹೊಲಸುಗಳಿಂದ ತೊಂದರೆಗೀಡಾಗಿದೆ. ಇದರಿಂದಾಗಿ ಇಲ್ಲಿ ಇಲಿಗಳ ಕಾಟ ಜಾಸ್ತಿಯಾಗಿದೆ. ಈ ಇಲಿಗಳು ಸಾಮಾನ್ಯ ಇಲಿಗಳಂತಿಲ್ಲ, ಬದಲಾಗಿ ಗಾತ್ರದಲ್ಲಿ ಅವುಗಳು ದೊಡ್ಡದಾಗಿವೆ. ಏಕಾಏಕಿ ಇಲಿಗಳ ಕಾಟ ಹೆಚ್ಚಾದ ಕಾರಣ ಬ್ರಿಟಿಷರು ಕಂಗಾಲಾಗಿದ್ದಾರೆ. ಇಲ್ಲಿನ ಜನರ ಸಂಖ್ಯೆಗಿಂತ ಇಲಿಗಳ ಸಂಖ್ಯೆ 25 ಕೋಟಿಗೆ ತಲುಪಿದೆ. ಏಕಾಏಕಿ ಇಷ್ಟೊಂದು ಇಲಿಗಳು ಬಂದಿರುವುದು ಜನರಲ್ಲಿ ಆತಂಕ ಮೂಡಿಸಿದೆ
ಸಮಯಕ್ಕೆ ಸರಿಯಾಗಿ ಕಸದ ತೊಟ್ಟಿಗಳ ಸಂಗ್ರಹ ವಿಳಂಬವೇ ಇಲಿಗಳ ಸಂಖ್ಯೆ ಏಕಾಏಕಿ ಹೆಚ್ಚಾಗಲು ಕಾರಣ ಎಂದು ಹೇಳಲಾಗುತ್ತಿದೆ. ಸ್ವಚ್ಛತೆಯ ಕೊರತೆಯಿಂದ ಇಲಿಗಳ ಸಂಖ್ಯೆ ಹೆಚ್ಚುತ್ತಿದೆ. ಈ ಇಲಿಗಳು ಈಗ ಬ್ರಿಟನ್ನ ಮನೆಗಳ ಮೇಲೆ ದಾಳಿ ಮಾಡುತ್ತಿವೆ. ಬ್ರಿಟಿಷ್ ಪೆಸ್ಟ್ ಕಂಟ್ರೋಲ್ ಅಸೋಸಿಯೇಷನ್ ಪ್ರಕಾರ, ಕಳೆದ 90 ದಿನಗಳಲ್ಲಿ ಈ ಸಮಸ್ಯೆಗಳನ್ನು ಎದುರಿಸಲು ಸಹಾಯ ಪಡೆಯುವವರ ಸಂಖ್ಯೆಯು ಹೆಚ್ಚಾಗಿದೆ.
ಬ್ರಿಟನ್ನಲ್ಲಿ ಸುಮಾರು 25 ಕೋಟಿ ಇಲಿಗಳು ವಾಸಿಸುತ್ತವೆ ಎಂದು ನಂಬಲಾಗಿದೆ. ಇದೀಗ ಚಳಿಯಿಂದಾಗಿ ಇಲಿಗಳು ಮನೆಗಳ ಒಳಗೆ ನುಗ್ಗಲು ಆರಂಭಿಸಿರುವುದು ಅತ್ಯಂತ ಆತಂಕಕಾರಿ ಸಂಗತಿಯಾಗಿದೆ ಎಂದು ಹೇಳಲಾಗಿದೆ.