ಕೋಲಾರ:- ಯುಗಾದಿ ನಂತರ ಧಾರ್ಮಿಕ ಮುಖಂಡನ ಸಾವಾಗಲಿದೆ ಎಂದು ಕೋಡಿಶ್ರೀ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ಯುಗಾದಿ ಕಳೆದ ನಂತರ ರಾಜ್ಯದಲ್ಲಿ ಒಳ್ಳೆ ಬೆಳೆ ಮತ್ತು ಮಳೆಯಾಗುವ ಲಕ್ಷಣಗಳಿವೆ ಎಂದು ಭವಿಷ್ಯ ನುಡಿದರು. ಇನ್ನು ಇದೇ ವೇಳೆ ರಾಜ್ಯ ರಾಜಕೀಯ ಬಗ್ಗೆ ಯುಗಾದಿ ಕಳೆದ ನಂತರ ಹೇಳುವೆ, ಇನ್ನ ಸಾಕಷ್ಟು ಸಮಯವಿದೆ ಎಂದರು.
ಗ್ಯಾರೆಂಟ್ ಗಳಿಂದ ಸರ್ಕಾರ ನಡೆಯುತ್ತಿದ್ದೀಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಶ್ರೀಗಳು, ನನ್ನಗಿಂತ ನಿಮಗೆ ಚೆನ್ನಾಗಿ ಗೊತ್ತು. ರಾಷ್ಟ್ರ ರಾಜಕಾರಣ ಸಹ ಯುಗಾದಿ ಮೇಲೆ ಗೊತ್ತಾಗುತ್ತದೆ. ಯುಗಾದಿ ನಂತರ ಭವಿಷ್ಯ ಬರುವುದು. ಒಂದು ತಿಂಗಳು ಕಳೆದ ಮೇಲೆ ಮಳೆ, ಬೇಳೆ, ರಾಜಕೀಯ, ದುಡಿಮೆ, ವ್ಯಾಪಾರ ಎಲ್ಲಾ ಗೊತ್ತಾಗಲಿದೆ ಎಂದು ಹೇಳಿದರು.
ಜಾಗತಿಕ ಮಟ್ಟದಲ್ಲಿ ತೊಂದರೆ ಇದೆ. ಬೆಂಕಿ ಹಾವಳಿ,ನೀರಿನ ಹಾವಳಿ, ಯುದ್ದ ಆಗುತ್ತೆ. ಅನೇಕ ಸಾವು ನೋವುಗಳು ಆಗುತ್ತೆ. ಮತಾದಂತೆ ಹೆಚ್ಚಾಗುತ್ತದೆ. ಬಾಂಬ್ ಸ್ಫೋಟ, ಭೂಕಂಪ ಆಗುತ್ತೆ. ಧಾರ್ಮಿಕ ಮುಖಂಡನ ಸಾವು ಸಹ ಆಗಲಿದೆ ಎಂದು ಸ್ಫೋಟಕ ಭವಿಷ್ಯ ನುಡಿದರು.