ಬೆಂಗಳೂರು: ವಿದ್ಯಾವಂತರಲ್ಲೇ ಜಾತಿ ಪ್ರಜ್ಞೆ ಹೆಚ್ಚಾಗುತ್ತಿದೆ. ಡಾಕ್ಟರ್ ಓದಿದವರು ಇನ್ನೂ ಮೌಢ್ಯ ಬಿಟ್ಟಿಲ್ಲ. ವಿದ್ಯಾರ್ಥಿಗಳು ಇಂಥ ಮೌಢ್ಯದಲ್ಲಿ ನಂಬಿಕೆ ಇಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿಉತ್ತಮ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು. ‘ದಲಿತ ಸಂಘರ್ಷ ಸಮಿತಿ ರಾಜ್ಯದಲ್ಲಿ ನಡೆಸಿದ ‘ನಮಗೆ ಸರಾಯಿ ಅಂಗಡಿ ಬೇಡ.
ವಸತಿ ಶಾಲೆ ಬೇಕು’ ಎನ್ನುವ ಹೋರಾಟದಿಂದ ಪ್ರೇರಿತನಾಗಿ ಮೊದಲ ಬಜೆಟ್ ಮಂಡಿಸುವ ವೇಳೆ ಗ್ರಾಮೀಣ ಭಾಗದಲ್ಲಿ ಮೊರಾರ್ಜಿ ಶಾಲೆಗಳನ್ನು ಆರಂಭಿಸಿದೆ. ಅಂದಿನಿಂದ ನಿರಂತರವಾಗಿ ಮೊರಾರ್ಜಿ ವಸತಿ ಶಾಲೆಗಳನ್ನು ತೆರೆಯುತ್ತಲೇ ಇದ್ದೇನೆ. ಸದ್ಯ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ 833 ವಸತಿ ಶಾಲೆಗಳಿವೆ. ಅಲ್ಪ ಸಂಖ್ಯಾತ ಇಲಾಖೆಯಡಿಯಲ್ಲಿ ರುವುದೂ ಸೇರಿ ಒಟ್ಟು 946 ವಸತಿ ಶಾಲೆಗಳಿವೆ ಎಂದು ವಿವರಿಸಿದರು. ಕೆಲವು ಹೋಬಳಿಗಳಲ್ಲಿಒಂದಕ್ಕಿಂತ ಹೆಚ್ಚು ವಸತಿ ಶಾಲೆಗಳಿವೆ.
Black Pepper Tea: ಕಾಳು ಮೆಣಸಿನ ಚಹಾ ಕುಡಿದಿದ್ದೀರಾ..? ಇದರ ಸೇವನೆಯಿಂದ ಸಿಗಲಿದೆ ಹಲವು ಪ್ರಯೊಜನಗಳು
ಕೆಲವೆಡೆ ಇರಲಿಲ್ಲ. ಹೀಗಾಗಿ, ಈ ವರ್ಷ 20 ವಸತಿ ಶಾಲೆಗಳನ್ನು ಆರಂಭಿಸಲು ಅನುಮತಿ ನೀಡಲಾಗಿದೆ. ಹೋಬಳಿಗೊಂದು ವಸತಿ ಶಾಲೆ ನನ್ನ ಗುರಿ ಮತ್ತು ಉದ್ದೇಶವಾಗಿದೆ. ಸರಕಾರಿ ವಸತಿ ಶಾಲೆಗಳ ಮಕ್ಕಳು ಈ ಬಾರಿ ಶೇ.96 ರಷ್ಟು ಫಲಿತಾಂಶ ಪಡೆದಿದ್ದಾರೆ. ಮುಂದಿನ ಬಾರಿ ಶೇ.100 ರಷ್ಟು ಅಂಕ ಪಡೆಯಬೇಕು,” ಎಂದು ಕರೆ ನೀಡಿದರು.