ಮೈಸೂರು: ಶಾಲಾ ವಾಹನಗಳು ಏಕಾಏಕಿ ಹೊತ್ತಿ ಉರಿದ ಘಟನೆ ಮೈಸೂರಿನ ಪಿರಿಯಾಪಟ್ಟಣದ ಡಿಟಿಎಮ್ಎನ್ ಶಾಲೆಯಲ್ಲಿ ನಡೆದಿದೆ. ಶಾಲಾ ವಿದ್ಯಾರ್ಥಿಗಳನ್ನು ಕೆಳಗಿಳಿಸಿ ಬಸ್ ನಿಲ್ಲಿಸಿದ್ದಾಗ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಒಂದು ಬಸ್ ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, ಕೆಲವು ಬಸ್ಗಳು ಭಾಗಶಃ ಸುಟ್ಟುಹೋಗಿದೆ. ವಿಚಾರ ತಿಳಿದು ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ಆರಿಸುವ ಕಾರ್ಯಾಚರಣೆ ನಡೆಸಿದ್ದಾರೆ.
ಬೆಂಕಿ ಪಕ್ಕದಲ್ಲಿ ನಿಲ್ಲಿಸಿದ್ದ ಬಸ್ ಗಳಿಗೂ ಹಬ್ಬಿದೆ. ಶಾಲಾ ಸಿಬ್ಬಂದಿ ತಕ್ಷಣ ಅಕ್ಕಪಕ್ಕದಲ್ಲಿದ್ದ ಬಸ್ ಗಳನ್ನು ದೂರ ನಿಲ್ಲಿಸಿದರು. ಅಗ್ನಿ ಶಾಮಕ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಬಸ್ ಸಂಪೂರ್ಣವಾಗಿ ಸುಟ್ಟಿದೆ. ವಿದ್ಯಾರ್ಥಿಗಳನ್ನು ಮನೆಗೆ ಡ್ರಾಪ್ ಮಾಡಿ ಬಂದ ಬಳಿಕ ಖಾಲಿ ಬಸ್ ಗೆ ಬೆಂಕಿ ಹೊತ್ತಿಕೊಂಡ ಹಿನ್ನೆಲೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
