ಬೆಂಗಳೂರು: ಮೆಟ್ರೋದಲ್ಲಿ ಪ್ರಯಾಣ ಮಾಡುವ ಮಹಿಳೆಯರ ಖಾಸಗಿ ಅಂಗಾಂಗಗಳ ಫೋಟೋ, ವಿಡಿಯೋ ತೆಗೆಯುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮಹೇಶ್ ಎಂದು ಗುರುತಿಸಲಾಗಿದೆ. ಆರೋಪಿ, ಮೆಟ್ರೋದಲ್ಲಿ ಪ್ರಯಾಣ ಮಾಡುವ ಮಹಿಳೆಯರ ಖಾಸಗಿ ಅಂಗಾಂಗಗಳ ಫೋಟೋ ಹಾಗೂ ವಿಡಿಯೋ ತೆಗೆಯುತ್ತಿದ್ದ.
ಆರೋಪಿಯ ಮೊಬೈಲ್ನಲ್ಲಿ ಸುಮಾರು 50 ಯುವತಿಯರ ವಿಡಿಯೋ ಮತ್ತು ಫೋಟೋಗಳು ಪತ್ತೆಯಾಗಿವೆ. ಡಿ.25 ರಂದು ಬೆಳಿಗ್ಗೆ 9 ಗಂಟೆಗೆ ಯುವತಿಯೊಬ್ಬಳು ಮೆಜೆಸ್ಟಿಕ್ನಿಂದ ಜೆಪಿ ನಗರ ಮೆಟ್ರೋ ಸ್ಟೇಷನ್ಗೆ ಹೋಗ್ತಿದ್ದಳು. ಈ ವೇಳೆ ಯುವಕ, ಯುವತಿಯ ಖಾಸಗಿ ಅಂಗಾಂಗಗಳ ವಿಡಿಯೋ ತೆಗೆಯುತ್ತಿದ್ದನ್ನು ಗಮನಿಸಿ ಆತನಿಗೆ ಹೊಡೆದಿದ್ದಾಳೆ.
Chanakya Niti: ನಿಮಗಿರುವ ಕಷ್ಟಗಳನ್ನು ಎದುರಿಸಲು ಚಾಣಕ್ಯ ಹೇಳಿದ ಈ 10 ವಿಷಯಗಳನ್ನು ನೆನಪಿಡಿ ಸಾಕು.!
ಈ ವೇಳೆ ನೈಟ್ ಡ್ಯೂಟಿ ಮುಗಿಸಿ ಮನೆಗೆ ಹೋಗ್ತಿದ್ದ ಇಬ್ಬರು ಸೆಕ್ಯೂರಿಟಿಗಳು ಯುವತಿಯ ಸಹಾಯಕ್ಕೆ ಧಾವಿಸಿದ್ದಾರೆ. ಈ ವೇಳೆ ಮಹೇಶ್ನ ಕೃತ್ಯ ಬೆಳಕಿಗೆ ಬಂದಿದೆ. ಜಯನಗರ ಮೆಟ್ರೋ ಸ್ಟೇಷನ್ನಲ್ಲಿ ಯುವಕನನ್ನು ರೈಲಿನಿಂದ ಕೆಳಗಿಳಿಸಿ, ಮೊಬೈಲ್ ಪರಿಶೀಲನೆ ನಡೆಸಿದಾಗ ವಿಡಿಯೋ ಹಾಗೂ ಫೋಟೋಗಳು ಪತ್ತೆಯಾಗಿವೆ. ಆತನನ್ನು ಜಯನಗರ ಪೊಲೀಸ ವಶಕ್ಕೆ ನೀಡಲಾಗಿದೆ.