ರಾಮನಗರ: ಪಾಪಿ ತಾಯಿಯೊಬ್ಬಳು (Mother) ಹೆತ್ತ ಮಗುವನ್ನೇ (Baby) ನದಿಗೆ (River) ಎಸೆದ ಘಟನೆ ರಾಮನಗರ (Ramanagara) ಜಿಲ್ಲೆ ಚನ್ನಪಟ್ಟಣ (Channaptna) ತಾಲೂಕಿನ ಕಾಲಿಕೆರೆ ಗ್ರಾಮದಲ್ಲಿ ನಡೆದಿದೆ. ಭಾಗ್ಯಾ ಹೆತ್ತ ಮಗುವನ್ನು ನದಿಗೆ ಎಸೆದ ತಾಯಿ. ಕಳೆದ 2 ವರ್ಷದಿಂದ ಭಾಗ್ಯಾ ತಾಯಿ ಮನೆಯಲ್ಲೇ ವಾಸವಿದ್ದಳು. ಭಾಗ್ಯಾ ಹಾಗೂ ಶ್ರೀನಿವಾಸ್ ದಂಪತಿಯ 1 ವರ್ಷ 6 ತಿಂಗಳ ಹಸುಗೂಸನ್ನು,
Winter Health: ಚಳಿಗಾಲದಲ್ಲಿ ಗಂಟಲು ನೋವು, ಕೆಮ್ಮು ಸಮಸ್ಯೆಯೇ?: ಈ ವಸ್ತುಗಳನ್ನ ತಯಾರಿಸಿ ಟೀ ಕುಡಿದು ನೋಡಿ!
ಭಾಗ್ಯಾ ರಾತ್ರಿ ಕೊಂಡಾಪುರ ಬಳಿಯ ಕಣ್ವ ನದಿಗೆ ಎಸೆದಿದ್ದಾಳೆ. ಇಂದು ಬೆಳಗ್ಗೆ ಕುಟುಂಬಸ್ಥರು ಮಗು ಎಲ್ಲಿ ಎಂದು ಕೇಳಿದಾಗ ನದಿಗೆ ಎಸೆದಿರುವುದಾಗಿ ಭಾಗ್ಯಾ ಹೇಳಿದ್ದಾಳೆ. ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಗ್ರಾಮಸ್ಥರು ನದಿಯಿಂದ ಮೃತ ಮಗುವಿನ ಶವ ಹೊರತೆಗೆದಿದ್ದಾರೆ. ಮಗುವನ್ನು ನದಿಗೆ ಎಸೆದಿರುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.