ತುಮಕೂರು : ಸಾಫ್ಟ್ವೇರ್ ಉದ್ಯೋಗಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ ದೊಡ್ಡಕೆರೆಗೆ ಹಾರಿ ಸಾಫ್ಟ್ವೇರ್ ಉದ್ಯೋಗಿ ಸಾವನ್ನಪ್ಪಿದ್ದಾಳೆ. ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ಮೃತದೇಹ ಹೊರತೆಗೆದಿದ್ದಾರೆ. ಕೌಟುಂಬಿಕ ಕಲಹಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.
ಮೈಕ್ರೋ ಫೈನಾನ್ಸ್ ಸಿಬ್ಬಂದಿ, ಸಾಲ ಪಡೆದವರ ಮಧ್ಯೆ ಮಾರಾಮಾರಿ : ಬೈಕ್ಗೆ ಬೆಂಕಿ
ಕುಣಿಗಲ್ ತಾಲ್ಲೂಕು ಸೊಬಗಾನಹಳ್ಳಿ ಗ್ರಾಮದ ನಿವಾಸಿಯಾಗಿರುವ ಸುಮಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೆಂಗಳೂರಿನಲ್ಲಿ ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಸುಮಾ ನಿನ್ನೆ ಬೆಂಗಳೂರಿನಿಂದ ಗ್ರಾಮಕ್ಕೆ ವಾಪಸ್ ಬಂದಿದ್ದಳು. ಕುಣಿಗಲ್ ದೊಡ್ಡಕೆರೆ ಬಳಿ ಸುಮಾಳ ಬ್ಯಾಗ್, ಮೊಬೈಲ್ ಬಸ್ ನಲ್ಲಿ ಪ್ರಯಾಣಿಸಿದ ಟಿಕೆಟ್ ಚಪ್ಪಲಿ ಪತ್ತೆಯಾಗಿದೆ. ಕಳೆದ ಗುರುವಾರ ಕುಣಿಗಲ್ನ ದೊಡ್ಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಿನ್ನೆಯಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ನಿರಂತರವಾಗಿ ಕುಣಿಗಲ್ ಕೆರೆಯಲ್ಲಿ ಶೋಧಕಾರ್ಯ ನಡೆಸಿದ್ದರು.
ಇಂದು ಬೆಳಗ್ಗೆ ಕೂಡ ಕಾರ್ಯಾಚರಣೆ ನಡೆದಿದ್ದು, ಕುಣಿಗಲ್ ಶಾಸಕ ಡಾ.ರಂಗನಾಥ್ ಅವರು ಸಹ ಶೋಧಕಾರ್ಯಾಚರಣೆಗೆ ಸಾಥ್ ನೀಡಿದ್ದು , ಲೈಫ್ ಜಾಕೆಟ್ ಧರಿಸಿ ಯುವತಿಯಗಾಗಿ ಶೋಧ ನಡೆಸಿದ್ದರು. ಸದ್ಯ ಯುವತಿಯ ಮೃತದೇಹವನ್ನು ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಘಟನೆ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.