ರಾಯಚೂರು : ರಿಮ್ಸ್ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆಯಾಗಿದ್ದಾಳೆ. ರಾಯಚೂರಿನ ರಿಮ್ಸ್ ಮೆಡಿಕಲ್ ಕಾಲೇಜ್ ನಲ್ಲಿ ಓಬಿಜಿ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂ.ಎಸ್. ಪ್ರಥಮ ವರ್ಷದ ವಿದ್ಯಾರ್ಥಿನಿ ನಿನ್ನೆ ಸಂಜೆಯಿಂದ ಫೋನ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ.
ಕಲಬುರಗಿ ಮೂಲದ ಭಾಗ್ಯಲಕ್ಷ್ಮಿ ಎಂಬ ಕಳೆದ 15 ದಿನಗಳ ಹಿಂದೆ ರಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಪ್ರವೇಶ ಪಡೆದಿದ್ದಳು. ಸ್ನೇಹಿತರ ಮನೆ ಹೋಗುತ್ತೇನೆ ಎಂದು ಹೇಳಿ ಹೋಗಿದ್ದು, ಇದೀಗ ನಾಪತ್ತೆಯಾಗಿದ್ದಾಳೆ. ಮಗಳ ಪೋನ್ ಸ್ವಿಚ್ ಆಫ್ ಆಗಿದ್ದರಿಂದ ಆತಂಕಗೊಂಡ ಪೋಷಕರು ಕಲಬುರಗಿಯಿಂದ ರಾಯಚೂರಿಗೆ ದೌಡಾಯಿಸಿದ್ದಾರೆ. ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.