ಬೆಂಗಳೂರು: ಯುವತಿಯೊಬ್ಬಳು ಫ್ಯಾನ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಧಾಮನಗರದಲ್ಲಿ ನಡೆದಿದ್ದು, ಈ ಮೂಲಕ ವರ್ಷದ ಮೊದಲ ದಿನವೇ ಸಾವಿನ ಸುದ್ದಿ ಬರೆಯುವಂತಾಗಿದೆ.
ವರ್ಷಿಣಿ (21) ಆತ್ಮಹತ್ಯೆಗೆ ಶರಣಾದ ಯುವತಿಯಾಗಿದ್ದಾಳೆ. ಸುಧಾಮನಗರದಲ್ಲಿ ಕುಟುಂಬದೊಂದಿಗೆ ವಾಸವಿರುವ ಈಕೆ ಜಯನಗರದ ಕಾಲೇಜ್ ಒಂದರಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ವಿಲ್ಸನ್ ಗಾರ್ಡನ್ ಪೊಲೀಸರು (Police) ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.