ಚಿತ್ರದುರ್ಗ: ವಿದ್ಯಾರ್ಥಿಯೋರ್ವ ಶಾಲೆಯಲ್ಲೇ ನೇಣಿಗೆ ಶರಣಾದ ಘಟನೆ ಹಿರಿಯೂರು ತಾಲೂಕಿನ ಉಡುವಳ್ಳಿ ನವೋದಯ ಶಾಲೆಯಲ್ಲಿ ನಡೆದಿದೆ. 8ನೇ ತರಗತಿ ವಿದ್ಯಾರ್ಥಿ ಪ್ರೇಮ ಸಾಗರ(13) ನೇಣಿಗೆ ಶರಣಾದ ವಿದ್ಯಾರ್ಥಿಯಾಗಿದ್ದು, ಈತ ಹೊಳಲ್ಕೆರೆ ತಾಲ್ಲೂಕಿನ ಕೆಂಗುಂಟೆ ಗ್ರಾಮದವನಾಗಿದ್ದಾನೆ.
SSLC, PUC ಪಾಸಾದವರಿಗೆ ಕೋರ್ಟ್’ನಲ್ಲಿ ಭರ್ಜರಿ ಉದ್ಯೋಗಾವಕಾಶ..! ತಿಂಗಳಿಗೆ 42,000/- ಸಂಬಳ – ಇಂದೇ ಅರ್ಜಿ ಸಲ್ಲಿಸಿ
ಸೀನಿಯರ್ ವಿದ್ಯಾರ್ಥಿಗಳು ರೇಗಿಸುತ್ತಿದ್ದರು ಎಂಬ ಕಾರಣಕ್ಕೆ ಆತ್ಮಹತ್ಯೆ ಶಂಕೆಯಾಗಿದ್ದು, ಪ್ರೇಮ ಸಾಗರ ಮೃತದೇಹವನ್ನು ತಾಲ್ಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಯೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.