ಕಾರವಾರ:- ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಕಾರವಾರದಲ್ಲಿ ಜರುಗಿದೆ.
ಬೆಂಗಳೂರಿನ ಹಲವೆಡೆ ಇಂದು ಸಹ ಇರಲ್ಲ ಪವರ್! ಕರೆಂಟ್ ಕಟ್ ಆಗೋ ಏರಿಯಾಗಳು ಇಲ್ಲಿದೆ!
ಇಲ್ಲಿನ ಕಾರವಾರದ ಭಟ್ಕಳದಲ್ಲಿ ಮೂತ್ರ ವಿಸರ್ಜನೆಗೆ ತೆರಳಿದ್ದ ವಿದ್ಯಾರ್ಥಿ ತೆರೆದ ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ಭಟ್ಕಳದಲ್ಲಿ ನಡೆದಿದೆ. ನಿರುಪಾದಿ ದುರ್ಗಪ್ಪ ಹರಿಜನ ಮೃತ ವಿದ್ಯಾರ್ಥಿ.
ಜಿಲ್ಲೆಯ ಯಲಬುರ್ಗಿ ತಾಲೂಕಿನ ಗಾಣದಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ 100 ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಬಂದಿದ್ದು, ಮೆಡಿಕಲ್ ಔಷಧಿಗಾಗಿ ಭಟ್ಕಳದಲ್ಲಿ ವಾಹನ ನಿಲ್ಲಿಸಲಾಗಿತ್ತು. ಈ ವೇಳೆ ನಿರುಪಾದಿ, ಭಟ್ಕಳದ ತಾಲೂಕು ಪಂಚಾಯತ್ ಎದುರಿನ ಖಾಲಿ ಜಾಗದಲ್ಲಿ ಮೂತ್ರ ವಿಸರ್ಜನೆಗೆ ತೆರಳಿದ್ದಾನೆ. ಆದ್ರೆ, ಕತ್ತಲು ಆಗಿದ್ದರಿಂದ ಬಾವಿ ಕಂಡಿಲ್ಲ. ಹಾಗೇ ಆ ಬಾವಿಗೆ ತಡೆಗೋಡೆ ಸಹ ಇರಲಿಲ್ಲ. ಹೀಗಾಗಿ ಏಕಾಏಕಿ ಬಾವಿಯೊಳಗೆ ಬಿದ್ದಿದ್ದಾನೆ.
ನಿರುಪಾದಿ ಬಾವಿಗೆ ಬಿದ್ದ ತಕ್ಷಣ ಜೊತೆಗಿದ್ದ ಬಾಲಕರು ಕೂಗಿಕೊಂಡಿದ್ದಾರೆ. ಕಿರುಚಾಟ ಕೇಳಿ ಸ್ಥಳೀಯರು ಸ್ಥಳಕ್ಕೆ ದೌಡಾಯಿಸಿದ್ದು, ಕೂಡಲೇ ಅಗ್ನಿ ಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಮೇರೆಗೆ ಅಗ್ನಿಶಾಮಕ ಸಿಬ್ಬಂದಿ ಸಹ ಬಾವಿಯಲ್ಲಿ ಬಿದ್ದಿದ್ದ ವಿದ್ಯಾರ್ಥಿಯನ್ನು ಮೇಲಕ್ಕೆ ಎತ್ತಿದ್ದಾರೆ. ಬಳಿಕ ಅಸ್ವಸ್ಥಗೊಂಡಿದ್ದ ಬಾಲಕನನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ತುರ್ತು ಚಿಕಿತ್ಸೆ ನೀಡಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿ ನಿರುಪಾದಿ ಕೊನೆಯುಸಿರೆಳೆದಿದ್ದಾನೆ.