ಮಂಡ್ಯ: ರೀಲ್ಸ್ ಮಾಡಿಕೊಂಡು ಸೋಶಿಯಲ್ ಮೀಡಿಯಾದಲ್ಲಿ ಫುಲ್ ಆಕ್ಟೀವ್ ಆಗಿದ್ದ ಶಿಕ್ಷಕಿ ಇದ್ದಕ್ಕಿದ್ದಂತೆ ಶವವಾಗಿ ಪತ್ತೆಯಾಗಿದ್ದು, ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿಯಾಗಿದ್ದ ಶಿಕ್ಷಕಿ ದೀಪಿಕಾ ಸಾವಿನ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಅಲ್ಲದೇ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿಲ್ಲ, ಯಾರೋ ದುಷ್ಕರ್ಮಿಗಳು ಕೊಲೆಗೈದು ಮೃತದೇಹ ಹೂತಿಟ್ಟಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ.
ಏನಿದು ಘಟನೆ?
ಶಾಲೆಗೆ ಹೋಗಿಬರುತ್ತೇನೆ ಎಂದು ಹೇಳಿಹೋಗಿದ್ದ ಮಹಿಳೆಯೊಬ್ಬರು ಮೂರೇ ದಿನಗಳಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ (Mandya) ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಮೇಲುಕೋಟೆಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ದೀಪಿಕಾ (28) ಎಂದು ಗುರುತಿಸಲಾಗಿದೆ.
ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿಯಗಿರುವ ದೀಪಿಕಾ ಮೇಲುಕೋಟೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಜನವರಿ 20 ರಂದು ದೀಪಿಕಾ ಶಾಲೆಗೆ ಹೋಗಿ ಬರುತ್ತೇನೆ ಎಂದು ಕೆಲಸಕ್ಕೆ ತೆರಳಿದ್ದರು. ಸಂಜೆಯಾದರೂ ಮಗಳು ಮನೆಗೆ ಬಾರದೇ ಇದ್ದಾಗ ಆತಂಕಗೊಂಡ ತಂದೆ ವೆಂಕಟೇಷ್ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ.
ಅಯೋಧ್ಯೆಗೆ ಹೋಗುವವರಿಗೆ ಗುಡ್ ನ್ಯೂಸ್ – ಆರು ವಿಶೇಷ ರೈಲು, ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್
ಈ ಸಂಬಂಧ ಪೊಲೀಸರು ಸಹ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು. ಸೋಮವಾರ ಸಂಜೆ ಮೇಲುಕೋಟೆಯ ಬೆಟ್ಟದ ತಪ್ಪಲಿನಲ್ಲಿ ಹದ್ದು, ಕಾಗೆ ಹಾರಾಡುತ್ತಿರುವುದು, ದುರ್ವಾಸನೆ ಬೀರುತ್ತಿರು ವುದನ್ನು ಕಂಡು ಸ್ಥಳೀಯರು ಸಂಶಯಗೊಂಡಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಹೂತಿಟ್ಟಿದ್ದ ಶವವನ್ನು ತಹಶೀಲ್ದಾರ್ ಸಮ್ಮುಖದಲ್ಲಿ ಹೊರತೆಗೆದಿದ್ದಾರೆ. ಬಳಿಕ ಮಂಡ್ಯದ ಎಸ್ಪಿ ಯತೀಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿದಿದೆ.