ಚಿತ್ರದುರ್ಗ: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ನಾಲ್ವರು ಸಾವಿಗೀಡಾದ ಘಟನೆ ಚಿಕ್ಕಬೆನ್ನೂರು ಬಳಿ ನಡೆದಿದೆ. ಮೃತರನ್ನು ಬೆಂಗಳೂರಿನ ಥಣಿಸಂದ್ರ ಮೂಲದ ಪ್ರಜ್ವಲ್ ರೆಡ್ಡಿ (30), ಹರ್ಷಿತಾ (28), ನೋಹನ್ (2) ಹಾಗೂ ವಿಜಯರೆಡ್ಡಿ ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ ಗೋವಾಕ್ಕೆ ಫಾರ್ಚುನರ್ ಕಾರಿನಲ್ಲಿ ತೆರಳುವ ವೇಳೆ ಈ ಅಪಘಾತ ಸಂಭವಿಸಿದೆ. ಪರಿಣಾಮ ಮಗು ಹಾಗೂ ಮಹಿಳೆ ಸೇರಿದಂತೆ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮತ್ತೋರ್ವ ಖಾಸಗಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ ಎಂದು ತಿಳಿದು ಬಂದಿದೆ.
6 ತಿಂಗಳಲ್ಲಿ ನಿಮ್ಮ ಆದಾಯವನ್ನು ಹೆಚ್ಚಿಸುವ ಬೆಳ್ಳುಳ್ಳಿ ಬಗ್ಗೆ ಇಲ್ಲಿದೆ ಮಾಹಿತಿ.!
ಘಟನೆಯಲ್ಲಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ. ಸ್ಥಳಕ್ಕೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.