ಹಾಸನ:- ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಊಪಿನಹಳ್ಳಿ ಗೇಟ್ ಬಳಿ ಕೆಎಸ್ಆರ್ಟಿಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ದುರ್ಮರಣ ಹೊಂದಿರುವ ಘಟನೆ ಜರುಗಿದೆ.
ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಸಿಕ್ಕ ಹಣವೆಷ್ಟು ಗೊತ್ತಾ!?.. ಅಬ್ಬಬ್ಬಾ ಕೇಳಿದ್ರೆ ಗಾಬರಿ ಆಗ್ತೀರಾ!
ಚನ್ನರಾಯಪಟ್ಟಣದ ಕಡೆಗೆ ಬರುತ್ತಿದ್ದ ಕಾರು ಹಾಗೂ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ KA-11-F-0511 ನಂಬರ್ನ ಸಾರಿಗೆ ಬಸ್ ಡಿಕ್ಕಿಯಾಗಿದ್ದು, ಡಿಕ್ಕಿ ರಭಸಕ್ಕೆ ಬಸ್ಸಿನಡಿ ಕಾರು ನುಗ್ಗಿದೆ. ಕಾರನ್ನು ಹೊರಗೆಳೆದು ಮೃತದೇಹಗಳನ್ನು ಹೊರ ತೆಗೆಯಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಅಪಘಾತದಿಂದ ಕಾರಿನಲ್ಲಿದ್ದ ಇಬ್ಬರ ಮೃತದೇಹಗಳು ನಜ್ಜುಗುಜ್ಜಾಗಿವೆ ಎಂದು ತಿಳಿದು ಬಂದಿದೆ.