ಹಾಸನ : ಪಾದಚಾರಿಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ನೆಹರು ನಗರದಲ್ಲಿ ಘಟನೆ ನಡೆದಿದೆ.
ಹನಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿರುವ ಮಲ್ಲಿಗಮ್ಮ (58), ಬ್ಯಾಂಕ್ಗೆ ತೆರಳಿ ವಾಪಾಸ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಟಿಪ್ಪರ್ ಲಾರಿ ಮಹಿಳೆಗೆ ಡಿಕ್ಕಿ ಹೊಡೆದದಿದ್ದು, ಮಲ್ಲಿಗಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಿಂದ ಕೆಲಕಾಲ ಸಂಚಾರ ದಟ್ಟಣೆಯುಂಟಾಗಿತ್ತು. ಘಟನಾ ಸ್ಥಳಕ್ಕೆ ಬೇಲೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಾಗಲಕೋಟೆ : ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾಗಿದ್ದು, ಭಾರೀ ಅನಾಹುತವೊಂದು ತಪ್ಪಿದೆ. ಬಾಗಲಕೋಟೆ ಜಿಲ್ಲೆಯ ಲೊಕಾಪೂರ ಪಟ್ಟಣದ ಹೊರವಲಯದಲ್ಲಿ ಘಟನೆ ನಡೆದಿದೆ.
ಬೆಳಗಾವಿಯಿಂದ ರಾಯಚೂರ್ ಗೆ ತರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಗದ್ದೆಗೆ ನುಗ್ಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಸೇಫ್ ಆಗಿದ್ದಾರೆ.