ಬಳ್ಳಾರಿ: ಬಳ್ಳಾರಿಯಿಂದ ಆಂಧ್ರ ಗಡಿಗೆ ತೆರಳುವ ಮತ್ತು ಹೊಸ ಏರ್ಪೋರ್ಟ್ ಗೆ ಹೋಗುವ ಚತುಷ್ಪಥ ರಸ್ತೆ… ಹನ್ನೆರಡು ವರ್ಷಗಳ ಹಿಂದೆ ಏರ್ಪೋರ್ಟ್ ನಿರ್ಮಾಣ ಮಾಡುವ ಹಿನ್ನೆಲೆ ಬಳ್ಳಾರಿಯಿಂದ ಮೋಕಾ ಗ್ರಾಮದವರೆಗೂ ಇರೋ ಇಪ್ಪತ್ತು ಕಿ.ಮೀ. ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಜನಾರ್ದನ ರೆಡ್ಡಿ ಕಾಲದಲ್ಲಿ ನಿರ್ಮಾಣ ಮಾಡಿದ್ರು. ಕಾರಣಾಂತರದಿಂದ ಏರ್ಪೋರ್ಟ್ ವಿಳಂಬವಾದ್ರೂ ಈ ರಸ್ತೆಯ ಮೇಲೆ ಎಂದಿನಂತೆ ಜನರ ಓಡಾಟ ಇತ್ತು. ಆದರೆ ಇದೀಗ ಈ ರಸ್ತೆ ಮಾರ್ಗದಲ್ಲೊಂದು ಟೋಲ್ ನಿರ್ಮಾಣ ಮಾಡಲಾಗಿದೆ ಕಳೆದೊಂದು ವಾರದಿಂದ ಹಣವನ್ನು ವಸೂಲಿ ಮಾಡಲಾಗುತ್ತಿದೆ.
ನಿಯಮಗಳ ಪ್ರಕಾರ 60 ಕಿ.ಮೀ. ರಸ್ತೆಗೆ ಟೋಲ್ ಹಾಕಬೇಕು. ಆದರೆ ಬಳ್ಳಾರಿಯಿಂದ ಮೂವತ್ತು ಕಿ.ಮೀ. ಈ ರಸ್ತೆ ಮೂಲಕ ತೆರಳಿದ್ರೇ, ಆಂಧ್ರ ತಲುಪುತ್ತೆವೆ. ಅಲ್ಲಿಗೆ ರಾಜ್ಯ ಹೆದ್ದಾರಿ ಮುಗಿಯುತ್ತಿದೆ. ಹೀಗಿದ್ರೂ ಇಲ್ಲಿ ಟೋಲ್ ಯಾಕೆ ನಿರ್ಮಾಣ ಮಾಡಿದ್ದಾರೆ ಎನ್ನುವುದು ಸ್ಥಳೀಯರ ಪ್ರಶ್ನೆಯಾಗಿದೆ. ಇನ್ನೂ ಮೂಲಗಳ ಪ್ರಕಾರ ಹನ್ನೆರಡು ವರ್ಷಗಳ ಹಿಂದೆ ಖಾಸಗಿಯವರು ಈ ರಸ್ತೆ ನಿರ್ಮಾಣ ಮಾಡಿದ್ರು. ಹತ್ತು ವರ್ಷಗಳ ಕಾಲ ಅವರೇ ಇದನ್ನು ನಿರ್ವಹಣೆ ಮಾಡಿದ್ದಾರೆ. ಇದೀಗ ಇದರ ನಿರ್ವಹಣೆ ಸರ್ಕಾರದ ಮೇಲಿರೋ ಹಿನ್ನೆಲೆ ಇಲ್ಲಿ ಟೋಲ್ ಹಾಕಲಾಗಿದೆ ಎಂದು ಹೇಳಲಾಗುತ್ತಿದೆ.
ಮೇಲ್ನೋಟಕ್ಕೆ ತಾತ್ಕಾಲಿಕ ಟೆಂಟ್ ಮಾದರಿಯಲ್ಲಿ ಇಲ್ಲಿ ಟೋಲ್ ನಿರ್ಮಾಣ ಮಾಡಲಾಗಿದ್ದು, ಸಾರ್ವಜನಿಕರ ಪರವಿರೋಧದ ಬಗ್ಗೆ ಅಭಿಪ್ರಾಯ ಪಡೆಯಲಾಗುತ್ತದೆಯೇ ಎನ್ನುವ ಅನುಮಾನವಿದೆ..ಇನ್ನೂ ಬಳ್ಳಾರಿಯಿಂದ ಇಪ್ಪತ್ತು ಕಿ.ಮೀ. ಇರೋ ಮೋಕಾ ಮತ್ತು ಸುತ್ತಮುತ್ತಲಿನ ಗ್ರಾಮಕ್ಕೆ ಹೋಗುವವರು ಇದೇ ರಸ್ತೆ ಮೇಲೆ ಹೋಗಬೇಕು. ಆದರೆ ಇಲ್ಲಿ ಸ್ಥಳೀಯರಿಗೂ ವಿನಾಯಿತಿ ನೀಡಿಲ್ಲದಿರೋದು ಸಾರ್ವಜನಿಕರಿಗಷ್ಟೇ ಅಲ್ಲದೇ ರೈತರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.