ಬೆಂಗಳೂರು ;– ದ್ವಿಚಕ್ರ ವಾಹನ ಸವಾರನ ಮೇಲೆ ಕ್ಯಾಂಟರ್ ಟ್ರಕ್ ಹರಿದಿದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಕೋರಮಂಗಲದ 1ಎ ಬ್ಲಾಕ್ನ 8ನೇ ಮುಖ್ಯರಸ್ತೆಯಲ್ಲಿ ಘಟನೆ ಜರುಗಿದ್ದು, ಅಶೋಕ್ ಮೃತರು ಎಂದು ಹೇಳಲಾಗಿದೆ.

ಅವರು ಕೋರಮಂಗಲದ ಮುಖ್ಯರಸ್ತೆಯಲ್ಲಿ ರಾತ್ರಿ ತೆರಳುತ್ತಿದ್ದಾಗ ಶಾಲೆಯ ಬಳಿ ಟ್ರಕ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಕೆಳಗೆ ಬಿದ್ದಿದ್ದು, ಕ್ಯಾಂಟರ್ ಹಿಂಬದಿಯ ಚಕ್ರಗಳು ಅವರ ಮೇಲೆ ಹರಿದಿದ್ದರಿಂದ ಅಶೋಕ್ ಅಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಕೋರಮಂಗಲದ ಕಾರ್ ಶೋ ರೂಂನಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ಅಶೋಕ್ ಅವರು ಬೊಮ್ಮನಹಳ್ಳಿಯಲ್ಲಿ ವಾಸಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಸದ್ಯ ಕ್ಯಾಂಟರ್ ಚಾಲಕನಿಗಾಗಿ ಆಡುಗೋಡಿ ಸಂಚಾರ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ.
