ಬೆಂಗಳೂರು:- ರಾಜಧಾನಿ ಬೆಂಗಳೂರಿನ ಕಮ್ಮನಹಳ್ಳಿಯಲ್ಲಿ ಮಳೆಯ ಹಿನ್ನೆಲೆ ಶಾರ್ಟ್ ಸರ್ಕ್ಯೂಟ್ ಆಗಿ ಟ್ರಾನ್ಸ್ಫಾರ್ಮರ್ ಹೊತ್ತಿ ಉರಿದ ಘಟನೆ ಜರುಗಿದೆ.
ಭಾನುವಾರ ಮಧ್ಯರಾತ್ರಿ 12:20ರ ಸುಮಾರಿಗೆ ಘಟನೆ ನಡೆದಿದೆ. ಹೋಟೆಲ್ ಎಂಪೈರ್ ಬಳಿಯ ಟ್ರಾನ್ಸ್ಫಾರ್ಮರ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.
ಮಳೆ ಆದ ಕಾರಣ ಟ್ರಾನ್ಸ್ಫಾರ್ಮರ್ನಲ್ಲಿ ಬೆಂಕಿ ಕಾಣಿಸಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ ಎನ್ನಲಾಗಿದೆ m