ಬೆಂಗಳೂರು’:– ಹಿಂದೂ ಜಾಗರಣಾ ವೇದಿಕೆ ಸಹ ಸಂಚಾಲಕ ಶಿವಕುಮಾರ್ ಅವರ ಕಾರು ತಡೆದ ನಾಲ್ವರು ಅಪರಿಚಿತ ಯುವಕರು ನಿಂದಿಸಿ, ಹಲ್ಲೆ ಮಾಡಿದ್ದಾರೆ.
ಸ್ಕೂಟಿ ಹಾಗೂ ಬೈಕ್ನಲ್ಲಿ ಬಂದ ನಾಲ್ವರು ಅಪರಿಚಿತ ಯುವಕರು ಈ ಕೃತ್ಯ ವೆಸಗಿ ಎಸ್ಕೇಪ್ ಆಗಿದ್ದಾರೆ. ಹಲ್ಲೆಗೊಳಗಾದ ಶಿವಕುಮಾರ್ ಅವರನ್ನ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.
ಶಿವಕುಮಾರ್ ಏರ್ಪೋರ್ಟ್ ನಲ್ಲಿ ಟ್ಯಾಕ್ಸಿ ಡ್ರೈವಿಂಗ್ ಕೆಲಸ ಮಾಡುತ್ತಿದ್ದಾರೆ. ಸರ್ಕಾರಿ ಬಸ್ ನಿಲ್ದಾಣಕ್ಕೆ ಪ್ಯಾಸೆಂಜರ್ ಡ್ರಾಪ್ ಮಾಡಿ ಹೋಗುವಾಗ ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿನ್ನ ಗಾಡಿ ನಂಬರ್ ನೋಡಿಕೊಂಡಿದ್ದೇವೆ, ಜೀವ ಸಹಿತ ಬಿಡಲ್ಲ ಎಂದು ಬೆದರಿಕೆ ಸಹ ಹಾಕಲಾಗಿದೆ. ನಡುರಸ್ತೆಯಲ್ಲಿ ಹಲ್ಲೆ ಮಾಡುತ್ತಿರುವುದನ್ನು ಸ್ಥಳೀಯರು ತಡೆದಿದ್ದಾರೆ. ನಂತರ ಗಾಯಗೊಂಡಿದ್ದ ಶಿವಕುಮಾರ್ ಅವರನ್ನು ಸ್ಥಳೀಯರೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ.