ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ನ ಹೊಸ ರೂಪಾಂತರ ತಳಿ ಕೊನೆಗೂ ರಾಜ್ಯಕ್ಕೆ ಕಾಲಿಟ್ಟಂಗಿದೆ. ಹೌದು ಮೈಸೂರಿನ 8 ಮಂದಿಯಲ್ಲಿ JN.1 ವೈರಸ್ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೊಸ ಸೋಂಕು ಸ್ಪೋಟದಿಂದ ಇದೀಗ ರಾಜ್ಯದ ಜನರಲ್ಲಿ ಆತಂಕ ಶುರುವಾಗಿದೆ.
ಕಳೆದ 24 ಗಂಟೆಯಲ್ಲಿ (ಇಂದು ಹೊಸದಾಗಿ) 106 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 7.35% ಕೊವಿಡ್ ಪಾಸಿಟಿವ್ ರೇಟ್ ವರದಿಯಾಗಿದೆ. ಕಳೆದ 24 ಗಂಟೆಯಲ್ಲಿ 1,441 ಟೆಸ್ಟ್ಗಳನ್ನು ಮಾಡಲಾಗಿದ್ದು, 1135 RTCPR ಹಾಗೂ 306 RAT ಟೆಸ್ಟ್ಗಳನ್ನ ಮಾಡಲಾಗಿದೆ.
ಬೆಂಗಳೂರಿನಲ್ಲೇ ಅತಿ ಹೆಚ್ಚು ಪಾಸಿಟಿವ್ ಪ್ರಕರಣ ವರದಿಯಾಗಿವೆ. ಬೆಂಗಳೂರಿನಲ್ಲಿ ಇಲ್ಲಿಯವರೆಗೂ 297 ಪ್ರಕರಣಗಳು ವರದಿಯಾಗಿವೆ. ಒಟ್ಟು 343 ಸಕ್ರಿಯ ಪ್ರಕರಣಗಳಲ್ಲಿ 323 ಸೋಂಕಿತರು (ಪ್ರಕರಣ) ಹೋಂ ಐಸೋಲೇಷನ್ನಲ್ಲಿ ಇರಲು ಸೂಚನೆ ನೀಡಲಾಗಿದೆ. 21 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅದರಲ್ಲಿ 7 ಸೋಂಕಿತರಿಗೆ ICUನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮೈಸೂರಿನಲ್ಲಿ 6 ಪ್ರಕರಣ ಪತ್ತೆ
ಬೆಂಗಳೂರಿನಲ್ಲಿ 95 ಪಾಸಿಟಿವ್ ಕೇಸ್ ಪತ್ತೆಯಾಗಿವೆ. ಮೈಸೂರಿನಲ್ಲಿ 6, ಮಂಡ್ಯದಲ್ಲಿ 1, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2, ಶಿವಮೊಗ್ಗ ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ತಲಾ ಒಂದು ಸೋಂಕು ಪ್ರಕರಣ ಪತ್ತೆಯಾಗಿದೆ.