ಬೆಂಗಳೂರು: ಕೋವಿಡ್ ವೈರಸ್ ಕಾಣಿಸಿಕೊಂಡ ಐದು ವರ್ಷದ ಬಳಿಕ ಮತ್ತೆ ದೇಶದಲ್ಲಿ ವೈರಸ್ ಹಾವಳಿ ಶುರುವಾಗಿದೆ. ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್ ಏಕಾಏಕಿ ಚೀನಾದಲ್ಲಿ ಹರಡುತ್ತಿದ್ದು, ಇದೀಗ ಬೆಂಗಳೂರಿಗೂ ಈ ವೈರಸ್ ಎಂಟ್ರಿ ಕೊಟ್ಟಿದೆ. ಬೆಂಗಳೂರಿನಲ್ಲಿ 8 ತಿಂಗಳ ಮಗುವಿಗೆ HMPV ವೈರಸ್ ಪತ್ತೆಯಾಗಿದೆ. ಮಗುವಿಗೆ ಜ್ವರ ಬಂದ ಹಿನ್ನೆಲೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿತ್ತು. ಈ ವೇಳೆ ಬ್ಲಡ್ ಟೆಸ್ಟ್ ಮಾಡಿಸಿದಾಗ HMPV ವೈರಸ್ ಪತ್ತೆಯಾಗಿದೆ.
ಇನ್ನೂ ಇದರ ಬೆನ್ನಲ್ಲೇ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಅಧಿಕಾರಿಗಳು ತುರ್ತು ವರ್ಚುವಲ್ ಸಭೆ ನಡೆಸುತ್ತಿದ್ದಾರೆ. ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿನ ಮುಂಜಾಗೃತ ಕ್ರಮದ ಕುರಿತು ಸಭೆ ನಡೆಸಲಾಗುತ್ತಿದೆ. ಸಭೆಯಲ್ಲಿ ಇಲಾಖೆ ನಿರ್ದೇಶಕರು, ಜಂಟಿ ನಿರ್ದೇಶರು ಭಾಗಿಯಾಗಿದ್ದಾರೆ.
ಒಡೆದ ತೆಂಗಿನಕಾಯಿ ಕೆಡದಂತೆ ಇಡಲು ಇಲ್ಲಿದೆ ಟಿಪ್ಸ್! ಹೀಗೆ ಮಾಡಿದ್ರೆ ಸಾಕು ತುಂಬಾ ದಿನ ತಾಜಾವಾಗಿರುತ್ತೆ.
ಈ ಬಗ್ಗೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಮಾಹಿತಿ ನೀಡಿದ್ದು, HMPV ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. HMPV ವೈರಸ್ ಭಾರತದಲ್ಲೂ ಇದೆ. ಆದ್ರೆ ಅದು ಮ್ಯೂಟೆಷನ್ ಆಗಿದಿಯಾ ಅನ್ನೋ ಬಗ್ಗೆ ಇನ್ನೂ ಸ್ಪಷ್ಟನೆ ಇಲ್ಲ. ನಮಗೆ ಚೀನಾ ವೈರಸ್ ನ ಸ್ಟ್ರಚರ್ ಹೇಗಿದೆ ಎಂದು ತಿಳಿದಿಲ್ಲ. ಈ ಹಿನ್ನೆಲೆ ಇದು ಸಾಮಾನ್ಯ HMPV ಅಥವಾ ಚೀನಾದ ಸ್ಟ್ರೈನ್ ಎನ್ನೋದು ಗೊಂದಲ ಇದೆ. 0.78 ರಷ್ಟು ಭಾರತದಲ್ಲೂ ಸಾಮಾನ್ಯ HMPV ವೈರಸ್ ಕಾಣಿಸುತ್ತೆ. ಇವರಿಗೆ ಟ್ರಾವೆಲ್ ಹಿಸ್ಟರಿ ಇಲ್ಲ. ಈ ಬಗ್ಗೆ ಆರೋಗ್ಯ ಇಲಾಖೆ ಕೂಡಾ ಪರಿಶೀಲನೆ ನಡೆಸುತ್ತಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ಏನು ಮಾಡಬೇಕು?
– ಕೆಮ್ಮುವಾಗ ಅಥವಾ ಸೀನುವಾಗ, ಬಾಯಿ ಮತ್ತು ಮೂಗನ್ನು ಕರವಸ್ತ್ರ ಅಥವಾ ಟಿಶ್ಯೂ ಪೇಪರ್ನಿಂದ ಮುಚ್ಚಿಕೊಳ್ಳಿ.
– ಕೈಗಳನ್ನು ಸಾಬೂನು ಮತ್ತು ನೀರು ಅಥವಾ ಆಲ್ಕೋಹಾಲ್ ಆಧಾರಿತ ಸ್ಯಾನಿಟೈಜರ್ನಿಂದ ಹೆಚ್ಚಾಗಿ ತೊಳೆಯಿರಿ.
– ಜನಸಂದಣಿ ಇರುವ ಸ್ಥಳಗಳನ್ನು ತಪ್ಪಿಸಿ.
– ಜ್ವರ, ಕೆಮ್ಮು ಮತ್ತು ಸೀನುವಿಕೆ ಇದ್ದಲ್ಲಿ ಸಾರ್ವಜನಿಕ ಸ್ಥಳಗಳಿಂದ ದೂರವಿರಿ.
– ಮನೆಯಲ್ಲಿಯೇ ಇರಿ ಮತ್ತು ನೀವು ಅನಾರೋಗ್ಯದಿಂದ ಬಳಲುತ್ತಿದ್ದರೆ ಇತರರೊಂದಿಗೆ ಸಂಪರ್ಕವನ್ನು ಮಿತಿಗೊಳಿಸಿ.
– ಸಾಕಷ್ಟು ನೀರು ಕುಡಿಯಿರಿ ಮತ್ತು ಪೌಷ್ಟಿಕ ಆಹಾರವನ್ನು ಸೇವಿಸಿ.
ಏನು ಮಾಡಬಾರದು?
– ಟಿಶ್ಯೂ ಪೇಪರ್ ಮತ್ತು ಕೈ ಕರ್ಚೀಫ್ ಮರುಬಳಕೆ.
– ಅನಾರೋಗ್ಯದ ಜನರೊಂದಿಗೆ ನಿಕಟ ಸಂಪರ್ಕ, ಟವೆಲ್, ಲಿನಿನ್ ಇತ್ಯಾದಿಗಳನ್ನು ಹಂಚಿಕೊಳ್ಳುವುದು.
– ಕಣ್ಣು, ಮೂಗು ಮತ್ತು ಬಾಯಿಯನ್ನು ಆಗಾಗ್ಗೆ ಸ್ಪರ್ಶಿಸುವುದು.
– ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು.
– ವೈದ್ಯರನ್ನು ಸಂಪರ್ಕಿಸದೆ ಔಷಧಿ ಸೇವಿಸುವುದು.