ಬೆಂಗಳೂರು:– ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಂದು ವಾರ ಉತ್ತಮ ಮಳೆ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇಳಿಕೆ ಕಾಣದ ಚಿನ್ನ, ಬೆಳ್ಳಿ ಬೆಲೆ; ಇಲ್ಲಿದೆ ಇಂದಿನ ದರಪಟ್ಟಿ..!
ಇನ್ನೂ ಬೆಂಗಳೂರಿನಲ್ಲಿ ಗಂಟೆಗೆ 50km ವೇಗದಲ್ಲಿ ಗಾಳಿ ಜೊತೆಗೆ ಮಳೆಯಾಗುವ ಸಾಧ್ಯತೆ ಇದೆ. ಇದೇ ರೀತಿ ಮುಂದಿನ ಏಳು ದಿನಗಳ ನಗರದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯಿಂದ ಮಾಹಿತಿ ನೀಡಿದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿಯ ಸಮಯದಲ್ಲಿ ಮಿಂಚು/ಗಾಳಿ ಸಹಿತ ಲಘುವಾಗಿ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇಂದಿನಿಂದ 4 ದಿನಗಳ ಕಾಲ ಹಳೆ ಮೈಸೂರು ಭಾಗದಲ್ಲಿಯೂ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಈ ಬಾರಿ ಹಿಂದೆಂದಿಗಿಂತಲೂ ಮೈಸೂರು ಭಾಗವೂ ವಿಪರೀತ ಉಷ್ಣಾಂಶ ಎದುರಿಸಿತ್ತು. ಗರಿಷ್ಠ 36 ರಿಂದ 38 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುತ್ತಿದೆ. ಹಳೆ ಮೈಸೂರು ಭಾಗದ ಮೈಸೂರು, ಮಂಡ್ಯ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು ಜನರು ನಿಟ್ಟುಸಿರು ಬಿಡುವಂತಾಗಿದೆ. ಮೇ 7 ರಿಂದ 12 ರ ವರೆಗೆ ಮೋಡ ಕವಿದ ವಾತಾವರಣವಿರಲಿದ್ದು, ಜೊತೆಗೆ ಸಾಧಾರಣದಿಂದ ಉತ್ತಮ ಮಳೆಯಾಗುವ ಸಾಧ್ಯತೆಗಳು ಇವೆ ಎಂದು ತಿಳಿಸಿದೆ.
ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.