ದಾವಣಗೆರೆ :- ಚನ್ನಗಿರಿ ತಾಲೂಕಿನ ಬಸವರಾಜಪುರದಲ್ಲಿ ಪಂಪ್ಸೆಟ್ಗೆ ಅಳವಡಿಸಿದ್ದ ವಿದ್ಯುತ್ ತಂತಿ ತುಳಿದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಜರುಗಿದೆ.
62 ವರ್ಷದ ಅಲಿಬಾಯಿ ಮೃತ ದುರ್ದೈವಿ ಎನ್ನಲಾಗಿದೆ. ಹೂವು ಬಿಡಿಸಲು ಹೋಗಿದ್ದಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಬಸವಪಟ್ಟಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ವಿದ್ಯುತ್ ಅವಘಡಕ್ಕೆ ಸಂಬಂಧಿಸಿದಂತೆ ಅನೇಕ ಪ್ರಕರಣಗಳು ದಾಖಲಾಗುತ್ತಿದ್ದು, ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಬೇಕಿದೆ.