ಬೆಳಗಾವಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಗೃಹಲಕ್ಷಿಯಿಂದ ಮನೆಯ ಯಜಮಾನಿಗೆ ಪ್ರತಿ ತಿಂಗಳು 2,000 ರೂ. ಹಣವನ್ನು ನೀಡಲಾಗುತ್ತಿದೆ. ಇದರಿಂದ ಹಲವಾರು ಮಹಿಳೆಯರಿಗೆ ಅನುಕೂಲವಾಗಿರುವ ಬಗ್ಗೆ ಹಲವು ಉದಾಹರಣೆಗಳು ಇವೆ. ಬೆಳಗಾವಿಯ ಅನಿತಾ ಎಂಬ ಬಡ ಮಹಿಳೆಯೊಬ್ಬರಿಗೆ ಗೃಹಲಕ್ಷ್ಮಿ ಹಣ ನೆರವಾಗಿದ್ದು ಅವರು ಆ ಹಣದಿಂದ ತಮ್ಮ ಪತಿಯ ಕಣ್ಣಿನ ಆಪರೇಷನ್ ಮಾಡಿಸಿದ್ದರು.
ಇದೀಗ ಇದೇ ಬೆಳಗಾವಿಯ ರಾಯಭಾಗ ತಾಲೂಕಿನ ಮಂಟೂರ ಗ್ರಾಮ ಪಂಚಾಯತಿಯ ಮಹಿಳೆ ಮಲ್ಲವ್ವ ಭೀಮಪ್ಪ ಮೇಟಿ, ಗೃಹಲಕ್ಷ್ಮೀಯಿಂದ ಬಂದ ಹಣದಿಂದ ಗ್ರಾಮದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗ್ರಂಥಾಲಯ ನಿರ್ಮಾಣ ಮಾಡಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು,
Health Care: ಖಾಲಿ ಹೊಟ್ಟೆಯಲ್ಲಿ ಎಂದಿಗೂ ಈ ಆಹಾರ ಮತ್ತು ಪಾನೀಯವನ್ನು ಮುಟ್ಟಲೇಬೇಡಿ!
ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಡೆವಲಪ್ಮೆಂಟ್ ಕಮೀಷನರ್ ಉಮಾ ಮಹದೇವನ್ ದಾಸ್ಗುಪ್ತ ಹಾಗೂ ಸಿಎಂ ಸಿದ್ದರಾಮಯ್ಯ ಅವರಿಗೆ ಟ್ಯಾಗ್ ಮಾಡಿದ್ದಾರೆ.ಮಂಟೂರ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರಾಗಿರುವ ಮಲ್ಲವ್ವ ಭೀಮಪ್ಪ ಮೇಟಿ ಅವರ ಕಾರ್ಯಕಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.