ಗ್ರಾ.ಪಂ ಸದಸ್ಯೆ ಮಹಿಳೆ ಓರ್ವರು ತನ್ನ ಗ್ರಾಮದ ಮಕ್ಕಳ ಭವಿಷ್ಯಕ್ಕಾಗಿ ತನ್ನ ಗ್ರಾಮದಲ್ಲಿ ಗೃಹಲಕ್ಷ್ಮೀ ಹಾಗೂ ಗ್ರಾ.ಪಂ ಸದಸ್ಯೆಗೆ ನೀಡುವ ಧನ ಸಹಾಯ ಕೂಡಿಸಿ ಗ್ರಂಥಾಲಯ ನಿರ್ಮಾಣ ಮಾಡಿ ಇತರ ಮಹಿಳೆಯರಿಗೆ ಮಾದರಿಯಾಗಿದ್ದಾರೆ.
Breaking News: ಉದ್ಯಮಿ ಮನೆಗೆ ನುಗ್ಗಿ 15 ಲಕ್ಷ ದೋಚಿದ ಖದೀಮರು ಎಸ್ಕೇಪ್!
ರಾಯಭಾಗ ತಾಲೂಕಿನ ಮಂಟೂರ ಗ್ರಾಮ ಪಂಚಾಯತಿಯ ಮಹಿಳೆ ಮಲ್ಲವ್ವ ಭೀಮಪ್ಪ ಮೇಟಿ, ಗೃಹಲಕ್ಷ್ಮೀಯಿಂದ ಬಂದ ಹಣದಿಂದ ಗ್ರಾಮದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗ್ರಂಥಾಲಯ ನಿರ್ಮಾಣ ಮಾಡಿದ್ದಾರೆ. ಗ್ರಂಥಾಲಯಕ್ಕೆ ಒಟ್ಟು ಒಂದೂವರೆ ಲಕ್ಷ ಖರ್ಚು ಮಾಡಲಾಗಿದೆ.
ತಮ್ಮ ಊರಿನ ಮಕ್ಕಳು ಓದುವುದಕ್ಕಾಗಿಯೇ ಬೆಂಗಳೂರು, ಧಾರವಾಡ, ಬಿಜಾಪುರಕ್ಕೆ ಹೋಗುತ್ತಾರೆ.ಅಲ್ಲಿ ಅವರ ತರಬೇತಿಗೆ ತಿಂಗಳು ತಿಂಗಳು ಹಣದ ಸಮಸ್ಯೆ ಆಗ್ತಿತ್ತು.ಊಟ, ಆರೋಗ್ಯದ ಸಮಸ್ಯೆ ಕೂಡ ಕಾಡ್ತಿದ್ದವು. ಅಲ್ಲಿ ಲೈಬ್ರರಿಯಲ್ಲಿ ಕುಳಿತು ಅವರು ಓದುತ್ತಾರೆ. ಇಂಥವರಿಗಾಗಿ ನಮ್ಮಲ್ಲಿಯೇ ಒಂದು ಲೈಬ್ರೆರಿ ಕಟ್ಟಬೇಕು ಅನ್ನೋದು ನನ್ನ ಕನಸಾಗಿತ್ತು. ನನಗೆ ಹದಿಮೂರು ತಿಂಗಳಿನಿಂದ ಗೃಹಲಕ್ಷ್ಮೀ ಹಣ 26 ಸಾವಿರ ರೂಪಾಯಿ ಬಂದಿತ್ತು. ಅದರೊಂದಿಗೆ ಗ್ರಾಮ ಪಂಚಾಯಿತಿ ಮೆಂಬರ್ ಆಗಿರುವ ಕಾರಣಕ್ಕೆ ಗೌರವ ಧನ ಕೂಡ ಸಿಗುತ್ತದೆ.ಈ ಎಲ್ಲಾ ಹಣವನ್ನು ಒಟ್ಟು ಮಾಡಿ ನಾನು ಒಂದು ಸಣ್ಣ ಪ್ರಮಾಣದ ಗ್ರಂಥಾಲಯ ಕಟ್ಟಿದ್ದೇನೆ. ಸಣ್ಣ ಗ್ರಂಥಾಲಯಕ್ಕೆ ಒಂದೂವರೆ ಲಕ್ಷ ರೂಪಾಯಿ ಖರ್ಚಾಗಿದೆ ಎಂದು ಮಲ್ಲವ್ವ ಭೀಮಪ್ಪ ಮೇಟಿ ಹೇಳಿದ್ದಾರೆ.