ಪ್ಯಾರಿಸ್:- ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟ ವೀಕ್ಷಣೆಗೆಂದು ಬಂದಿದ್ದ ಆಸ್ಟ್ರೇಲಿಯಾ ಮೂಲದ ಮಹಿಳೆ ಮೇಲೆ ಗ್ಯಾಂಗ್ ರೇಪ್ ಮಾಡಿರುವ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ.
Banking Jobs: ಡಿಗ್ರಿ ಪಾಸಾದವರಿಗೆ ‘SBI’ ನಲ್ಲಿ 1040 ಹುದ್ದೆಗಳಿಗೆ ಅರ್ಜಿ ಆಹ್ವಾನ..! ಬೇಗ ಅಪ್ಲೈ ಮಾಡಿ
ಇದೇ ಜುಲೈ 19ರ ರಾತ್ರಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮೌಲಿನ್ ರೋಗ್ ಕ್ಯಾಬರ್ಟ್ನ ಪಬ್ವೊಂದರಲ್ಲಿ ಮದ್ಯ ಸೇವಿಸಿ, ಹೊರ ಬರುವ ಸಂದರ್ಭದಲ್ಲಿ ಆಕೆಯನ್ನು ಐವರು ಕಾಮುಕರ ಗ್ಯಾಂಗ್ ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ನಡೆಸಿದ್ದಾಗಿ ಮಹಿಳೆ ಆರೋಪಿಸಿದ್ದಾರೆ. ಅಲ್ಲದೇ ಫ್ರಾನ್ಸ್ನಲ್ಲಿ ಮಹಿಳೆಯರಿಗೆ ಸರಿಯಾದ ಸುರಕ್ಷತೆ ಇಲ್ಲವೆಂದು ಅಸಮಾಧಾನ ಹೊರಹಾಕಿದ್ದಾರೆ
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವೀಡಿಯೋದಲ್ಲಿ ಸಂತ್ರಸ್ತ ಮಹಿಳೆ ಹರಿದ ಬಟ್ಟೆಯಲ್ಲಿದ್ದು, ಸ್ಥಳೀಯರ ರಕ್ಷಣೆ ಪಡೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಅನೇಕ ಸಿಸಿಟಿವಿ ದೃಶ್ಯಗಳು ಲಭ್ಯವಾಗಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.