ಉತ್ತರ ಪ್ರದೇಶ:- ಕೆಲಸ ಕೊಟ್ಟ ಅನ್ನದಾತರಿಗೆ ಇಲ್ಲೊಬ್ಬ ಮನೆಗೆಲಸದಾಕೆ ದ್ರೋಹ ಬಗೆದಿದ್ದು, ತನ್ನ ಮೂತ್ರ ಬೆರೆಸಿ ರೊಟ್ಟಿ ತಯಾರಿಸಿ ಮಾಲೀಕರಿಗೆ ಆಹಾರವಾಗಿ ಕೊಡುತ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬ್ರ್ಯಾಂಡ್ ಬೆಂಗಳೂರು ಮುಳುಗುತ್ತಿದೆ: ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ!
ಛೇ ಇವಳ ಈ ನೀಚ ಕೃತ್ಯಕ್ಕೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಎಸ್, ಮನೆಕೆಲಸದಾಕೆ ಓರ್ವಳು ಓನರ್ ಮನೆಯವರಿಗೆಯೇ ಹಿಟ್ಟಿನಲ್ಲಿ ಮೂತ್ರ ಬೆರೆಸಿ ರೊಟ್ಟಿ ತಯಾರಿಸಿ ಕೊಟ್ಟ ಘಟನೆ ಜರುಗಿದೆ. ಆಕೆಯ ಈ ದುಶ್ಕೃತ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಇದೀಗ ಭಾರೀ ವೈರಲ್ ಆಗಿದೆ.
ಈ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್ನಲ್ಲಿ ನಡೆದಿದ್ದು, ಇಲ್ಲಿನ ಥಾನಾ ಕ್ರಾಸಿಂಗ್ ರಿಪಬ್ಲಿಕ್ ಪ್ರದೇಶದ ಫ್ಲಾಟ್ ಒಂದರಲ್ಲಿ ವಾಸವಿರುವ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಮನೆಯಲ್ಲಿ ಮನೆಕೆಲಸದಾಕೆ ತನ್ನ ಮೂತ್ರ ಬೆರೆಸಿ ರೊಟ್ಟಿ ತಯಾರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾಳೆ. ರೀನಾ ಹೆಸರಿನ ಆ ಮಹಿಳೆ ಕಳೆದ 8 ವರ್ಷದಿಂದ ಈ ಉದ್ಯಮಿಯ ಮನೆಯಲ್ಲಿಯೇ ಕೆಲಸವನ್ನು ಮಾಡುತ್ತಿದ್ದು, ಇದೀಗ ಆಕೆ ಉಂಡ ಮನೆಗೆಯೇ ದ್ರೋಹ ಬಗೆಯುವ ಕೆಲಸವನ್ನು ಮಾಡಿದ್ದಾಳೆ.
ಉದ್ಯಮಿಯ ಮನೆಯವರು ಕೆಲ ತಿಂಗಳುಗಳಿಂದ ನಿರಂತರವಾಗಿ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದರು. ಅಷ್ಟೇ ಅಲ್ಲದೇ ಅವರು ಯಕೃತ್ತಿನ ಸೋಂಕಿಗೂ ತುತ್ತಾಗಿದ್ದರು. ಆದರೆ ಆರೋಗ್ಯದಲ್ಲಿ ಇಷ್ಟರಮಟ್ಟಿಗೆ ಏರುಪೇರು ಆಗಲು ಕಾರಣ ಏನೆಂಬುದು ಮನೆಯವರಿಗೆ ತಿಳಿಯಲಿಲ್ಲ. ನಂತರ ಒಂದು ದಿನ ಅಡುಗೆ ಮನೆಯಲ್ಲಿ ಮೊಬೈಲ್ ಕ್ಯಾಮರಾದಲ್ಲಿ ಗುಟ್ಟಾಗಿ ರೆಕಾರ್ಡಿಂಗ್ ಮಾಡುವ ವೇಳೆ ಮನೆಕೆಲಸದಾಕೆ ಪಾತ್ರೆಗೆ ಮೂತ್ರ ವಿಸರ್ಜಿಸಿ ಅದೇ ಮೂತ್ರದಲ್ಲಿ ರೊಟ್ಟಿ ತಯಾರಿಸಿದ ಆಘಾತಕಾರಿ ಸಂಗತಿ ಬಯಲಾಗಿದೆ. ಕೂಡಲೇ ಮನೆಯವರು ಮನೆಕೆಲಸದಾಕೆಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರನ್ನು ನೀಡಿದ್ದಾರೆ.