ಧಾರವಾಡ: ಡೆತ್ ನೋಟ್ ಬರೆದಿಟ್ಟು ಮಹಿಳೆಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ರಾಜನಗರದಲ್ಲಿ ನಡೆದಿದೆ. ಸುಂದರವ್ವ ಗಂಬೇರ ಎಂಬ ಮಹಿಳೆಯೇ ಆತ್ಮಹತ್ಯೆ ಮಾಡಿಕೊಂಡವಳು. ತಾನು ಮಾಡಿದ ಸಾಲ ತೀರಿಸಲಾಗದೇ ಸುಂದರವ್ವ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ವ ಸಹಾಯ ಸಂಘದಲ್ಲಿ ಈಕೆ ಸಾಲ ಮಾಡಿದ್ದು, ಅದಕ್ಕೆ ಸಂಘದ ಕೆಲವರು ಕಿರುಕುಳ ನೀಡುತ್ತಿದ್ದಾರೆ. ಜೊತೆಗೆ ತನ್ನಿಂದ ಸಾಲ ಪಡೆದವರು ಹಣ ವಾಪಸ್ ಕೊಡದೇ ಸತಾಯಿಸುತ್ತಿದ್ದಾರೆ.
ಆರ್ಥಿಕವಾಗಿ ಸಂಕಷ್ಟ ಎದುರಿಸುತ್ತಿರುವ ತನಗೆ ಅನೇಕರು ನಿಂದನೆ ಮಾಡುತ್ತಿದ್ದಾರೆ. ನಾನು ಆತ್ಮಹತ್ಯೆ ಮಾಡಿಕೊಂಡ ನಂತರ ನನ್ನ ಶವವನ್ನು ಯಾವುದಾದರೂ ಆಸ್ಪತ್ರೆಗೆ ಕೊಡಿ. ಅಂತ್ಯ ಸಂಸ್ಕಾರಕ್ಕೂ ನನ್ನ ಬಳಿ ಹಣವಿಲ್ಲ ಎಂದು ಡೆತ್ ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.