ಶಿವಮೊಗ್ಗ:- ಇತ್ತೀಚೆಗೆ ಕ್ಷುಲ್ಲಕ ವಿಚಾರಕ್ಕೆ ಕರ್ನಾಟಕದಲ್ಲಿ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿದೆ. ಅದರಂತೆ ಇಲ್ಲೊಬ್ಬ ಪತಿರಾಯ ಕ್ಷುಲ್ಲಕ ವಿಚಾರಕ್ಕೆ ಜಗಳ ತೆಗೆದು ಹೆಂಡತಿಯನ್ನೇ ಕೊಲೆಗೈದಿರುವ ಘಟನೆ ಜರುಗಿದೆ.
ಕೌಟುಂಬಿಕ ಕಲಹದಿಂದಾಗಿ ಪತ್ನಿಯ ಕತ್ತಿಗೆ ಟವೆಲ್ ಬಿಗಿದು ಪಾಪಿ ಪತಿ ಹತ್ಯೆಗೈದಿದ್ದಾನೆ. ಶಿಕಾರಿಪುರ ತಾಲೂಕಿನ ಅಂಬ್ಲಿಗೊಳ ಗ್ರಾಮದಲ್ಲಿ ಘಟನೆ ಜರುಗಿದೆ. 28 ವರ್ಷದ ಗೌರಮ್ಮ ಕೊಲೆಯಾದ ಮಹಿಳೆ. ಆರೋಪಿ ಶನಿವಾರ ಮಧ್ಯಾಹ್ನ ಮದ್ಯ ಸೇವಿಸಿ ಮನೆಗೆ ಬಂದು ಪತ್ನಿ ಜೊತೆ ಜಗಳವಾಡಿದ್ದ. ಅಲ್ಲದೇ ಆಕೆಯ ಮೇಲೆ ಹಲ್ಲೆ ಮಾಡಿದ್ದಾನೆ. ಬಳಿಕ ಜಗಳ ವಿಕೋಪಕ್ಕೆ ತಿರುಗಿ ಟವೆಲ್ನಿಂದ ಪತ್ನಿ ಗೌರಮ್ಮಳ ಕತ್ತಿಗೆ ಬಿಗಿದು ಕೊಲೆ ಮಾಡಿದ್ದಾನೆ.
ಘಟನಾ ಸ್ಥಳಕ್ಕೆ ಶಿಕಾರಿಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ.
ಆರೋಪಿ ಮನೋಜ್ನನ್ನು ಬಂಧಿಸಿದ್ದಾರೆ.