ಕಲಬುರಗಿ: ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಲಾಡಮುಗಳಿ ಗ್ರಾಮದಲ್ಲಿ ಜಾತಿ ನಿಂದನೆ ಕೇಸ್ ದಾಖಲಿಸಿದಕ್ಕೆ ಹೆದರಿದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಿಖಿಲ್ ಪೂಜಾರಿ (23) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು,.
ನಿಖಿಲ್ ಪೂಜಾರಿ ಲಾಡಮುಗಳಿ ಗ್ರಾಮದ ಹೊರ ವಲಯದ ಜಮೀನಿನಲ್ಲಿ ನೇಣಿಗೆ ಶರಣಾಗಿದ್ದಾನೆ. ನಾಲ್ಕು ದಿನದ ಹಿಂದೆ ಲಾಡಮುಗುಳಿ ಗ್ರಾಮದಲ್ಲಿ ಜಾತ್ರೆ ವೇಳೆ ಗಲಾಟೆ ನಡೆದಿತ್ತು. ಎರಡು ಸಮುದಾಯದ ಯುವಕರ ನಡುವೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದಿತ್ತು. ಗಲಾಟೆಯ ಬಳಿಕ ಊರವರ ಸಮ್ಮುಖದಲ್ಲಿ ರಾಜಿ ಸಂಧಾನ ಕೂಡ ನಡೆದಿತ್ತು.
![Demo](https://ainlivenews.com/wp-content/uploads/2023/12/spoorthi-1.jpg)
ಉದ್ಯೋಗ ಆಕಾಂಕ್ಷಿಗಳೇ ಗಮನಿಸಿ.. BBMPಯಲ್ಲಿ 11,307 ಗ್ರೂಪ್ ಡಿ ಹುದ್ದೆಗಳು ಖಾಲಿ ಇದೆ..! ಇಂದೇ ಅರ್ಜಿ ಸಲ್ಲಿಸಿ
ಬಳಿಕ ಇನ್ನೊಂದು ಸಮುದಾಯ ಯುವಕರು ನಿಖಿಲ್ ಪೂಜಾರಿ ಸೇರಿ ಹಲವರ ವಿರುದ್ದ ದೂರು ನೀಡಿದ್ದರು.ನರೋಣಾ ಪೊಲೀಸ್ ಠಾಣೆಯಲ್ಲಿ ನಿಖಿಲ್ ಸೇರಿ ಹಲವರ ವಿರುದ್ದ ಜಾತಿ ನಿಂದನೆ ಕೇಸ್ ದಾಖಲಾಗಿತ್ತು. ಇದರಿಂದ ಹೆದರಿ ನಿಖಿಲ್ ಪೂಜಾರಿ ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)