ವಿಜಯಪುರ: ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೋರ್ವ ಚಲಿಸುವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರದ ಕೂಡಗಿ ಹಾಗೂ ಮುಳವಾಡದಲ್ಲಿ ನಡೆದಿದೆ. ಪರಶುರಾಮ್ ಮಾನೆ (24) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು,
ಪರಶುರಾಮ್ ವಿಜಯಪುರ ಜಿಲ್ಲೆಯ ಬಸವನ ಬಾಗೆವಾಡಿ ತಾಲೂಕಿನ ಮುತ್ತಗಿ ಗ್ರಾಮದವನಾಗಿದ್ದು, ಲಾರಿ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದನು. ಇನ್ನೂ ಈ ಘಟನೆ ಸಂಬಂಧ ವಿಜಯಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.