ಕೋಲಾರ : ಚುಚ್ಚು ಮದ್ದು ನೀಡಿದ ಕೆಲವೇ ಗಂಟೆಗಳಲ್ಲಿ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೋಲಾರ ತಾಲೂಕಿನ ವಕ್ಕಲೇರಿ ಗ್ರಾಂದಲ್ಲಿ ಘಟನೆ ನಡೆದಿದೆ. ವಿನೋದ್ ( 23 ) ಮೃತ ಯುವಕ.
ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕುವಿನಿಂದ ಇರಿತ ; ಹಲ್ಲೆಕೋರರ ಕಂಬಕ್ಕೆ ಕಟ್ಟಿ ಥಳಿತ
ಜ್ವರದಿಂದ ಬಳಲುತ್ತಿದ್ದ ವಿನೋದ್ ಕ್ಲಿನಿಕ್ಗೆ ಹೋಗಿ ಚಿಕಿತ್ಸೆ ಪಡೆದಿದ್ದ. ವಕ್ಕಲೇರಿಯಲ್ಲಿರುವ ಸನ್ ರೈಸ್ ಕ್ಲಿನಿಕ್ ನ ವೈದ್ಯ ಡಾ. ರಫೀಕ್ ನೀಡಿದ್ದ ಇಂಜೆಕ್ಷನ್ ನೀಡಿದ್ದರು. ಆದರೆ ಇಂಜೆಕ್ಷನ್ ಪಡೆದ ಕೆಲವೇ ಗಂಟೆಗಳಲ್ಲಿ ಯುವಕ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯದಿಂದಾಗಿ ಯುವಕ ಮೃತಪಟ್ಟಿರುವುದಾಗಿ ಪೋಷಕರು ಆರೋಪಿಸಿದ್ದಾರೆ. ವೈದ್ಯರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಈ ಘಟನೆಗೆ ಸಂಬಂಧಪಟ್ಟಂತೆ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ರಿಪೋರ್ಟ್ ಬಂದ ಬಳಿಕವಷ್ಟೇ ಅಸಲಿ ಸತ್ಯಾಂಶ ತಿಳಿದು ಬರಬೇಕಿದೆ