ಬೆಂಗಳೂರು: ಮಧ್ಯರಾತ್ರಿ ಅತಿ ವೇಗವಾಗಿ ಕಾರು ಚಲಾಯಿಸಿಕೊಂಡು ಬರುವಾಗ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕಿರಣ್ (28) ಮೃತ ಚಾಲಕ. ತಲಘಟ್ಟಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ 1.20ಕ್ಕೆ ಈ ಅಪಘಾತ ನಡೆದಿದೆ. ಮಹರಾಜ ಪ್ಯಾಲೇಸ್ ಹೋಟೆಲ್ ಕಡೆಯಿಂದ ರೀತು ಆಸ್ಪತ್ರೆ ಕಡೆ ಹೋಗುವಾಗ ಈ ಅಪಘಾತ ಸಂಭವಿಸಿದೆ.
MS Dhoni News car: 3.30 ಕೋಟಿಯ ಕಾರು ಖರೀದಿಸಿದ MS ಧೋನಿ: ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್!
ಅತಿ ವೇಗ ಮತ್ತು ನಿರ್ಲಕ್ಷ್ಯತೆಯಿಂದ ಬಂದು ಫುಟ್ ಪಾತ್ ಮೇಲಿರುವ ಮರಕ್ಕೆ ಡಿಕ್ಕಿಯಾಗಿದೆ. ಡಿಕ್ಕಿ ರಸಭಕ್ಕೆ ಕಿರಣ್ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತಲಘಟ್ಟಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತವಾದ ಕಾರನ್ನು ವಶಕ್ಕೆ ಪಡೆದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.