ಯುವಕನೋರ್ವ ತನ್ನ ಮನೆಯವರನ್ನು ಒಪ್ಪಿಸಿ ಮಂಗಳಮುಖಿಯನ್ನು ಅದ್ದೂರಿ ಮದುವೆಯಾಗಿದ್ದಾನೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ಈ ನವ ಜೋಡಿಗೆ ನೆಟ್ಟಿಗರು ಶುಭ ಹಾರೈಸಿದ್ದಾರೆ.
ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿಗೆ ಸರ್ಕಾರದಿಂದ ಭರವಸೆ ಸಿಕ್ಕಿಲ್ಲ:ಜಯ ಮೃತ್ಯುಂಜಯ ಸ್ವಾಮೀಜಿ
ಘಟನೆ ತೆಲಂಗಾಣದ ಕರೀನಗರದಲ್ಲಿ ನಡೆದಿದ್ದು, ಯುವಕನೊಬ್ಬ ಕುಟುಂಬಸ್ಥರ ಸಮ್ಮುಖದಲ್ಲಿ ಮಂಗಳಮುಖಿಯೊಂದಿಗೆ ಶಾಸ್ತ್ರೋಕ್ತವಾಗಿ ವಿವಾಹವಾಗಿದ್ದಾನೆ. ಹೌದು ಜಗಿತ್ಯಾಲ ಜಿಲ್ಲೆಯ ಗೊಲ್ಲಪಲ್ಲಿ ಮಂಡಲದ ಲಕ್ಷೀಪುರ ಗ್ರಾಮದ 24 ವರ್ಷದ ಶ್ರೀನಿವಾಸ ಎಂಬ ಯುವಕ ತನ್ನ ಕುಟುಂಬಸ್ಥರ ಮನವೊಲಿಸಿ 23 ವರ್ಷದ ಕರುಣಾಂಜಲಿಯನ್ನು ಅದ್ದೂರಿಯಾಗಿ ಮದುವೆಯಾಗಿದ್ದಾನೆ.
ಈ ಇಬ್ಬರೂ ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು, ಇದೀಗ ಇವರು ಸಮಾಜದ ಎಲ್ಲಾ ಅಡೆತಡೆಗಳನ್ನು ಮುರಿದು ಕುಟುಂಬಸ್ಥರ ಸಮ್ಮುಖದಲ್ಲಿ ಶಾಸ್ತ್ರೋಕ್ತವಾಗಿ ಮದುವೆಯಾಗಿದ್ದಾರೆ.