ಬೆಂಗಳೂರು:- ಮೆಟ್ರೋ ಟ್ರ್ಯಾಕ್ ಮೇಲೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಜರುಗಿದೆ.
ಘಟನೆ ನಡೆದ ಹಿನ್ನೆಲೆಯಲ್ಲಿ ಯಶವಂತಪುರ- ನಾಗಸಂದ್ರ ಮಾರ್ಗದಲ್ಲಿ ಮೆಟ್ರೋ ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸಂಜೆ 7:12ಕ್ಕೆ ಮೆಟ್ರೋ ಹಳಿಗೆ ಕೇರಳ ಮೂಲದ ಯುವಕ ಧುಮುಕಿದ್ದ. ಸದ್ಯ ಯುವಕನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದ್ದು, ಆತನನ್ನು ಸಂಜೀವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಯುವಕನ ಸ್ನೇಹಿತನನ್ನು ವಿಚಾರಣೆ ಮಾಡುತ್ತಿದ್ದಾರೆ. ರೈಲು ಸೇವೆ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಸದ್ಯ ಯಶವಂತಪುರ ಮೆಟ್ರೋ ನಿಲ್ದಾಣದಿಂದ ಪ್ರಯಾಣಿಕರು ಹೊರ ಬರುತ್ತಿದ್ದಾರೆ.