ಶಿವಮೊಗ್ಗ:– ಜಿಲ್ಲೆಯ ಹೊಸನಗರದ ಮಾರಿಗುಡ್ಡ ಬಡಾವಣೆಯಲ್ಲಿ ಆರು ವರ್ಷಗಳ ಕಾಲ ಪ್ರೀತಿಸಿ ಕೊನೆಗೆ ಯುವಕ ಕೈಕೊಟ್ಟ ಹಿನ್ನೆಲೆ ಮನನೊಂದ ಯುವತಿಯೊಬ್ಬಳು ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜರುಗಿದೆ.
ಸುಧಾ ಮತ್ತು ಶ್ರೀಕಾಂತ್ ಕಳೆದ ಆರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಮದುವೆಯಾಗುವುದಾಗಿ ಹೇಳಿ ಆಕೆಯೊಂದಿಗೆ ಶ್ರೀಕಾಂತ್ ದೈಹಿಕ ಸಂಪರ್ಕ ಕೂಡ ನಡೆಸಿದ್ದನು. ಕೊನೆಗೆ ಶ್ರೀಕಾಂತ್ ಆಕೆಯನ್ನು ಮದುವೆಯಾಗಲು ನಿರಾಕರಿಸಿದ್ದಾನೆ.
ಇದರಿಂದ ಮನನೊಂದು ಸುಧಾ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಅಸ್ವಸ್ಥ ಯುವತಿಯಲ್ಲಿದ್ದ ಮಗಳನ್ನು ಪೋಷಕರು ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರಿದಿದೆ.