ಬೆಂಗಳೂರು:- ವಿಲ್ಸನ್ಗಾರ್ಡನ್ ಪೊಲೀಸ್ ಠಾಣಾ ವ್ಯಾಪ್ತಿಯ ಸುಧಾಮ ನಗರದಲ್ಲಿ ವೈಯಕ್ತಿಕ ಕಾರಣಕ್ಕೆ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ.
ವರ್ಷಿಣಿ(21) ಮೃತ ದುರ್ದೈವಿ. ಪೋಷಕರೊಂದಿಗೆ ವಾಸವಿದ್ದ ವರ್ಷಿಣಿ, ಖಾಸಗಿ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದರು. ಡಿ.31ರ ರವಿವಾರ ರಾತ್ರಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಾವುದೇ ಡೆತ್ನೋಟ್ ಲಭ್ಯವಾಗಿಲ್ಲ. ವೈಯಕ್ತಿಕ ಕಾರಣದಿಂದ ಮನನೊಂದು ಆತ್ಮಹತ್ಯೆ ಹಾದಿ ಹಿಡಿದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಫೋಟೋಗ್ರಫಿಯಲ್ಲಿ ಆಸಕ್ತಿ ಹೊಂದಿದ್ದ ವರ್ಷಿಣಿ ಹೊಸ ವರ್ಷ ಸಂಭ್ರಮದ ಫೋಟೋ ತೆಗೆಯಲು ಸಿದ್ದತೆ ನಡೆಸಿದ್ದಳು ಎಂದು ತಿಳಿದುಬಂದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನಗರದ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.