ಹಾವೇರಿ: ಭಾರತದಲ್ಲಿ ಮಾತ್ರವಲ್ಲದೇ ಜಗತ್ತಿನಾದ್ಯಂತ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕೆಲವೊಮ್ಮೆ ಕೆಲಸದ ಒತ್ತಡದಿಂದಾಗಿ, ಮತ್ತೆ ಕೆಲವೊಮ್ಮೆ ದೈನಂದಿನ ಜೀವನದ ಒತ್ತಡದಿಂದಾಗಿ ಜನರು ಜೀವವನ್ನೇ ಕಳೆದುಕೊಳ್ಳುವ ಆಯ್ಕೆಯನ್ನು ಮಾಡಿಕೊಳ್ಳುತ್ತಿದ್ದಾರೆ.
ಇದೀಗ ತಂಬಾಕು ಸೇವನೆ ಬಿಡುವಂತೆ ಬುದ್ಧಿವಾದ ಹೇಳಿದ್ದಕ್ಕೆ ನೇಣು ಬಿಗಿದಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ತಾಲೂಕಿನ ಕರ್ಜಗಿ ಗ್ರಾಮದ ರೈಲ್ವೆ ಸ್ಟೇಷನ್ ಬಳಿ ನಡೆದಿದೆ. ಬೀಬಿಜಾನ್ ಸೊಂಡಿ (18) ಮೃತ ಯುವತಿಯಾಗಿದ್ದು,
10th, PUC ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ..! ಇಂದೇ ಅಪ್ಲೈ ಮಾಡಿ
ಮನೆಗೆಲಸ ಮಾಡುತ್ತಿದ್ದ ಯುವತಿ ಕಳೆದ ಕೆಲವು ದಿನಗಳಿಂದ ತಂಬಾಕು ಸೇವನೆ ಚಟಕ್ಕೆ ಅಂಟಿಕೊಂಡಿದ್ದಳು. ತಂಬಾಕು ಸೇವನೆ ಮಾಡುವುದನ್ನು ಬಿಡುವಂತೆ ಬೀಬಿಜಾನ್ಗೆ ತಂದೆ ತಾಯಿ ಬುದ್ಧಿವಾದ ಹೇಳಿದ್ದರು. ತಂದೆ ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ಸಂಬಂಧ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.