ಬೆಂಗಳೂರು: ಪ್ರಿಯಕರನ ಮನೆ ಮೇಲೇರಿ ಯುವತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಯೊಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ನಡೆದಿದೆ.
ಈ ಘಟನೆ ಬೆಂಗಳೂರಿನ ಹೆಗ್ಗನಹಳ್ಳಿಯಲ್ಲಿ ನಡೆದಿದೆ. ಯುವಕ ಹಾಗೂ ಯುವತಿ ಕಳೆದ ನಾಲ್ಕೈದು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಇದೀಗ ಯುವಕನು ಯುವತಿಗೆ ಕೈ ಕೊಟ್ಟಿದ್ದಾನೆ.
ಪ್ರಿಯಕರ ಕೈಕೊಟ್ಟಿದ್ದರಿಂದ ಬೇಸರಗೊಂಡ ಯುವತಿ ನೇರವಾಗಿ ಆತನ ಮನೆಗೆ ತೆರಳಿದ್ದಾಳೆ. ಅಲ್ಲದೆ ಮನೆಯ ಟೆರೇಸ್ಗೆ ತೆರಳಿ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದಾಳೆ.
ಇತ್ತ ಯುವತಿ ಮನೆಗೆ ಬರುತ್ತಿದ್ದಂತೆಯೇ ಯುವಕ ಮನೆಯಿಂದ ಎಸ್ಕೇಪ್ ಆಗಿದ್ದಾನೆ. ಹೀಗಾಗಿ ಕೈಯಲಿ ಚಾಕು ಹಿಡಿದು ಪ್ರಿಯಕರನ ಮನೆ ಟೆರೇಸ್ ಮೇಲೆ ಯುವತಿ ನಿಂತಿದ್ದಾಳೆ. ಅಲ್ಲದೇ ಈಗಲೇ ಪ್ರಿಯಕರನನ್ನು ಇಲ್ಲಿಗೆ ಕರೆಸಿ ಎಂದು ಬೇಡಿಕೆ ಇಟ್ಟಿದ್ದಾಳೆ.
ಸ್ಥಳಕ್ಕೆ ರಾಜಗೋಪಾಲನಗರ ಪೊಲೀಸರ ಭೇಟಿ ಕೆಳಗಿಳಿಯುವಂತೆ ಹೇಳುತ್ತಿರುವ ಪೊಲೀಸರು ಯಾರಾದ್ರೂ ಬಂದ್ರೆ ಹಾರ್ತೀನಿ ಅಂತಿರೋ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ವಶಕ್ಕೆ ಪಡೆದ ಪೊಲೀಸರು ಯುವತಿ ಠಾಣೆಗೆ ಕರೆದೊಯ್ದು ವಿಚಾರಣೆ ರಾಜಗೋಪಾಲನಗರ ಪೊಲೀಸರಿಂದ ಮುಂದುವರಿದ ವಿಚಾರಣೆ