ಶಿವಮೊಗ್ಗ:- ಶಿವಮೊಗ್ಗದ ಹಾರನಹಳ್ಳಿ ಗ್ರಾಮದಲ್ಲಿ ಯುವತಿ ತಂದೆ ತಾಯಿ ಬೈದಿದಕ್ಕೆ ಮನನೊಂದು ವಿಷ ಸೇವಿಸಿದ್ದಾಳೆ.
ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಕೇಸ್: ಕಾಂಗ್ರೆಸ್ ಮುಖಂಡರ ವಿರುದ್ಧ ದೂರು!
ಹೆಚ್ಚು ಮೊಬೈಲ್ ಹೆಚ್ಚು ನೋಡ್ಬೇಡ ಎಂದು ಪೋಷಕರು ಬುದ್ಧಿ ಹೇಳಿದ್ದಕ್ಕೆ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ.
ಶಿವಮೊಗ್ಗದ ಹಾರನಹಳ್ಳಿ ಗ್ರಾಮದಲ್ಲಿ ಈ ಘಟನೆ ಜರುಗಿದೆ. 20 ವರ್ಷದ ಧನುಶ್ರೀ ಎಂದು ಗುರುತಿಸಲಾಗಿದೆ. ಶಿವಮೊಗ್ಗದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಳು. ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿದ್ದಳು. ಇದನ್ನು ಗಮನಿಸಿದ್ದ ಪೋಷಕರು ಮೊಬೈಲ್ ಹೆಚ್ಚು ಬಳಸಬೇಡ, ಓದಿನ ಕಡೆ ಗಮನ ಕೊಡು ಎಂದು ಬುದ್ಧಿ ಹೇಳಿದ್ದರು.
ಇದೇ ವಿಚಾರಕ್ಕೆ ಮನನೊಂದ ಯುವತಿ ಕಳೆದ 3 ದಿನದ ಹಿಂದೆ ಮನೆಯಲ್ಲಿ ವಿಷ ಸೇವಿಸಿದ್ದಳು. ವಿಷ ಸೇವಿಸಿದ್ದ ಯುವತಿಯನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದುರಾದೃಷ್ಟವಶಾತ್ ವಿಧಿವಶರಾಗಿದ್ದಾರೆ.